BJP govt

ಎಸ್‌ಸಿ/ಎಸ್‌ಟಿ ಕೋಟಾ: ಬಿಜೆಪಿ ದಾಳ; ಇಕ್ಕಟ್ಟಿಗೆ ಸಿಲುಕಿದ ಕರ್ನಾಟಕ ಕಾಂಗ್ರೆಸ್
ರಾಜ್ಯದಲ್ಲಿ ಐದನೇ ಒಂದರಷ್ಟು ಜನಸಂಖ್ಯೆಯನ್ನು ಹೊಂದಿರುವ ಕೆಳ ಸಮುದಾಯಗಳನ್ನು ಒಲಿಸಿಕೊಳ್ಳಲು ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ಒಂದು ವಾರ ಮುಂಚಿತವಾಗಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ/ಎಸ್‌ಟಿ ಬೃಹತ್ ಸಮಾವೇಶವನ್ನು ಆಯೋಜಿಸುತ್ತಿದೆ.

ವೋಟರ್ ಐಡಿ ಹಗರಣ: 'ಕೆಲಸಕ್ಕೆ ಬಂದವರನ್ನು ಬಂಧಿಸುವುದಲ್ಲ... ಕಿಂಗ್ ಪಿನ್ ಶಾಸಕ, ಸಚಿವರ ಬಂಧಿಸಿ: ಕಾಂಗ್ರೆಸ್ ಆಗ್ರಹ
ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ವೋಟರ್ ಐಡಿ ಹಗರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿರೋಧ ಪಕ್ಷ ಕಾಂಗ್ರೆಸ್, ಕೆಲಸಕ್ಕೆ ಬಂದವರನ್ನು ಬಂಧಿಸುವುದಲ್ಲ... ಕಿಂಗ್ ಪಿನ್ ಶಾಸಕ, ಸಚಿವರನ್ನು ಮೊದಲು ಬಂಧಿಸಿ ಎಂದು ಆಗ್ರಹಿಸಿದೆ.

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ- ಕಾಂಗ್ರೆಸ್ ಟೀಕೆ
ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5,000ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಈ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಇಲ್ಲ ಆಹ್ವಾನ, ಜೆಡಿಎಸ್ ತೀವ್ರ ಆಕ್ರೋಶ
ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಭಾರತ ಐಕ್ಯತಾ ಯಾತ್ರೆ ಭದ್ರತೆ ಕುರಿತು ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ: ಕಾಂಗ್ರೆಸ್ ಆರೋಪ
ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯ ಭದ್ರತೆ ಕುರಿತು ರಾಜ್ಯ ಸರ್ಕಾರ ತೀವ್ರ ನಿರ್ಲಕ್ಷ್ಯ ವಹಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ಸತ್ಯಾಂಶ ಬಹಿರಂಗಪಡಿಸಿ - ಕುಮಾರಸ್ವಾಮಿ ಆಗ್ರಹ
ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ರಾಹುಲ್ ಗಾಂಧಿ ವಿರುದ್ಧ ದೇಶದ್ರೋಹ ಆರೋಪ ಹೊರಿಸಿದ ಸ್ಮೃತಿ ಇರಾನಿ
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಕ್ಷದ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಶನಿವಾರ ದೇಶದ್ರೋಹದ ಆರೋಪ ಹೊರಿಸಿದ್ದಾರೆ.

ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯಿಂದಲೇ ಬೆಂಗಳೂರು ಪ್ರವಾಹ!!
ಭಾರಿ ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಭಾಗಗಳನ್ನು ನೀರಿನಲ್ಲಿ ಮುಳುಗಿಸಿದ್ದು, ಇದಕ್ಕೆ ಅಧಿಕಾರಿಗಳು ಮತ್ತು ಸರ್ಕಾರದ ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯೇ ಕಾರಣ ಎಂದು ಹೇಳಲಾಗಿದೆ.

ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ದಿ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲವನ್ನು ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ದಿಪಡಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

