BJP govt

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ: ಬೊಮ್ಮಾಯಿ
ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಇತಿಹಾಸದಲ್ಲಿ ದೋಣಿಯಲ್ಲಿ ಸಾಗುವ ಸ್ಥಿತಿ ನಿರ್ಮಾಣವಾಗಿರಲಿಲ್ಲ: ಸಿದ್ದರಾಮಯ್ಯ
ಬೆಂಗಳೂರಿನ ಇತಿಹಾಸದಲ್ಲಿ ದೋಣಿಯಲ್ಲಿ ಸಾಗುವ ಪರಿಸ್ಥಿತಿ ಯಾವಾಗಲೂ ನಿರ್ಮಾಣವಾಗಿರಲಿಲ್ಲ. ಈಗ ಇದು ಸಾಧ್ಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಉಮೇಶ್ ಕತ್ತಿ ನಿಧನ ಹಿನ್ನಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ
ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.

ಪಿಎಸ್ಐ ನೇಮಕಾತಿ ಹಗರಣ: ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ!; ಶಾಸಕ ಬಸವರಾಜ ದಢೇಸುಗೂರು ಆಡಿಯೋ ಲೀಕ್, ವೈರಲ್
ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ಲೀಕ್ ಆಗಿದ್ದು, ಸ್ವತಃ ಸ್ಥಳೀಯ ಶಾಸಕರೇ ಅಭ್ಯರ್ಥಿಗಳಿಂದ ಹಣ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಆಡಿಯೋ ಟೇಪ್ ಇದೀಗ ವ್ಯಾಪಕ ವೈರಲ್ ಆಗಿದೆ.

ಕಮಿಷನ್ ರೂಪದಲ್ಲಿ ಹೆಣ್ಣು, ಹಣ; ಬಿಜೆಪಿ ಆಡಳಿತದಲ್ಲಿ ‘ಮಂಚ’ವೂ ಲಂಚದ ರೂಪ ಪಡೆದಿದೆ: ಕಾಂಗ್ರೆಸ್
ರಾಜ್ಯದ ಬಿಜೆಪಿ ಸರ್ಕಾರ ಲಂಚ-ಮಂಚದ ಸರ್ಕಾರ ಎಂದು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಕಟುವಾಗಿ ಟೀಕೆ ಮಾಡಿದೆ.

'ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ?': ಸಿದ್ದರಾಮಯ್ಯ ಕಿಡಿ
ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದ್ದು, ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ?ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

'ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯ್ತು, ಈಗ ಮತ್ತೆ ಲವ್ ಲೆಟರ್': ಡಿಕೆ ಶಿವಕುಮಾರ್
ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಹಣ ಕಬಳಿಸಲು ತರಾತುರಿಯಲ್ಲಿ ಅಮೃತ್ ನಗರೋತ್ಥಾನ ಯೋಜನೆ: ಎಎಪಿ ಆರೋಪ
ಅಮೃತ್ ನಗರೋತ್ಥಾನ ಯೋಜನೆ ಮೂಲಕ ಜನರ ತೆರಿಗೆ ಹಣವನ್ನು ಲೂಟಿ ಮಾಡಲು ಬಿಜೆಪಿಯ ಶೇ. 40 ರಷ್ಟು ಕಮೀಷನ್ ಸರ್ಕಾರ ತರಾತುರಿಯಲ್ಲಿ ಯೋಜನೆ ಜಾರಿಗೆ ತರುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಪ್ರವಾಹ ಪೀಡಿತ ಪ್ರದೇಶಕ್ಕೆ ಮಂತ್ರಿಗಳಿಂದ ನೆಪ ಮಾತ್ರದ ಭೇಟಿ: ಡಿ.ಕೆ. ಶಿವಕುಮಾರ್ ಆರೋಪ
ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂತ್ರಿಗಳು, ಶಾಸಕರು ಹಾಗೂ ನಾಯಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪ ಮಾಡಿದ್ದಾರೆ.

