BJP govt

ಎಲ್ ಪಿ ಜಿ ಸಿಲಿಂಡರ್ ಬೆಲೆಯೇರಿಸಿದ ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ
ಜನವರಿ ತಿಂಗಳಿನಿಂದ ಇಲ್ಲಿಯವರೆಗೆ ದೇಶದ ನಾಲ್ಕು ಪ್ರಮುಖ ಮೆಟ್ರೊ ನಗರಗಳಲ್ಲಿನ ಎಲ್ ಪಿ ಜಿ ಸಿಲಿಂಡರುಗಳ ಬೆಲೆ ಏರಿಕೆಯಾಗಿರುವ ಅಂಕಿ ಅಂಶಗಳನ್ನು ರಾಹುಲ್ ತಮ್ಮ ಟ್ವೀಟ್ ನಲ್ಲಿ ನಮೂದಿಸಿದ್ದಾರೆ.

ಕೋವಿಡ್ ಮತ್ತು ಪ್ರವಾಹ ನಿರ್ವಹಣೆಗೆ ತಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ಪ್ರಸ್ತುತ ನಮ್ಮ ಮೊದಲ ಆದ್ಯತೆ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಎಂದು ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇರಳ ಮಾದರಿ ಅನುಸರಿಸಿ, ಬಡವರ ನೆರವಿಗೆ ಬನ್ನಿ: ಕೊರೋನಾ ಕುರಿತು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು
ಕೊರೋನಾವೈರಸ್ ಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ಆರ್ಥಿಕತೆಗೆ ನೆರೆಯ ಕೇರಳದ ಮಾದರಿಯನ್ನು ಅನುಸರಿಸಿ ಚೈತನ್ಯ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖ್ಯ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?: ಮೇಕೆದಾಟು ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟ ಲಕ್ಷಾಂತರ ಮಂದಿಯ ಸಾವಿಗೆ ಕೇಂದ್ರ, ರಾಜ್ಯ ಸರ್ಕಾರಗಳೇ ಹೊಣೆ: ಸಿದ್ದರಾಮಯ್ಯ
ಲಕ್ಷಾಂತರ ಮಂದಿ ಕನಿಷ್ಠ ಆರೋಗ್ಯ ಸವಲತ್ತುಗಳು, ಜೀವರಕ್ಷಕ ಔಷಧಿಗಳು ಸಿಗದೆ ಸಾವು ಬದುಕಿನ ನಡುವೆ ಸೆಣೆಸುತ್ತಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊತ್ತುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

2010ರಲ್ಲೇ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ಮುಂದಾಗಿತ್ತು, ನಾವು ವಿರೋಧಿಸಿದ್ದೆವು: ಎಚ್.ಡಿ. ಕುಮಾರಸ್ವಾಮಿ
2010ರಲ್ಲೇ ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ಮುಂದಾಗಿತ್ತು. ಆದರೆ ಜೆಡಿಎಸ್ ಪಕ್ಷ ವಿರೋಧಿಸಿತ್ತು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ಕೇಂದ್ರಕ್ಕೆ ಮಮತಾ ಆಗ್ರಹ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಕ್ಷಣವೇ "ಜನ ವಿರೋಧಿ" ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಒತ್ತಾಯಿಸಿದ್ದಾರೆ.

ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ
ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಶನಿವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ.

