Bjp high command

ಪುತ್ರನಿಗೆ ರಾಜ್ಯಾಧ್ಯಕ್ಷ ಹುದ್ದೆಗಾಗಿ ಹೈಕಮಾಂಡ್‌ಗೆ ಬಿಎಸ್ ಯಡಿಯೂರಪ್ಪ ಬ್ಲಾಕ್‌ಮೇಲ್: ಬಸನಗೌಡ ಪಾಟೀಲ್ ಯತ್ನಾಳ್
ಕರ್ನಾಟಕ ಬಿಜೆಪಿಯ ಘಟಕದೊಳಗಿನ ಆಂತರಿಕ ಕಚ್ಚಾಟ ತೀವ್ರಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಡಾಲು ಪಕ್ಷದ ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಹೈಕಮಾಂಡ್ ಮೌನ; ಅರಣ್ಯ ರೋಧನವಾದ ಯತ್ನಾಳ್ ಆರ್ಭಟ! (ಸುದ್ದಿ ವಿಶ್ಲೇಷಣೆ)
-ಯಗಟಿ ಮೋಹನ್ಬಿಜೆಪಿಯ ಹಿರಿಯ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಮತ್ತೆ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಿಡಿದು ನಿಂತಿದ್ದಾರೆ.

ಭಿನ್ನಮತೀಯರಿಗೆ ಬಿಜೆಪಿ ಹೈಕಮಾಂಡ್ ಮೊದಲ ಆದ್ಯತೆ: ನಂತರ ವಿಜಯೇಂದ್ರ, ಅಶೋಕ್ ಭೇಟಿ ಸಾಧ್ಯತೆ!
ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿಸೆಂಬರ್ 3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ.

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ 'ಪುಣ್ಯಕೋಟಿ' ಸಾಮ್ರಾಟ್ ನೇಮಕ ಮಾಡಿದ್ದು ಏಕೆ?
ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

ದಯವಿಟ್ಟು ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ಬಿಜೆಪಿ ಹೈಕಮಾಂಡ್ ಗೆ ಮಾಜಿ ಸಿಎಂ ಸದಾನಂದಗೌಡ!
ರಾಜ್ಯ ಬಿಜೆಪಿ ನಾಯಕರನ್ನು ಅಸಡ್ಡೆಯಿಂದ ನೋಡುತ್ತಿರುವ ಬಿಜೆಪಿ ಹೈಕಮಾಂಡ್ ನ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಮತ್ತು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಠುಸ್ ಆಯ್ತು ಊಹಾ-ಪೋಹ: ರಾಜ್ಯಾಧ್ಯಕ್ಷ-ವಿಪಕ್ಷ ನಾಯಕರ ನೇಮಕಕ್ಕೆ ನಡೆಯದ ಚರ್ಚೆ; ಬಿಜೆಪಿ ನಾಯಕರು ದೆಹಲಿಗೆ ಹೋಗಿದ್ದೇಕೆ?
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯದ ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದರು.

ಭಿನ್ನಮತ ಶಮನಕ್ಕೆ ಡಿವಿ ಸದಾನಂದ ಗೌಡಗೆ ಹೈಕಮಾಂಡ್ ಬುಲಾವ್; ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್?
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಪಕ್ಷ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನುವ ವದಂತಿಗಳ ನಡುವೆಯೇ, ಬಿಜೆಪಿ ಹೈಕಮಾಂಡ್ ಅವರನ್ನು ಬುಧವಾರ ದೆಹಲಿಗೆ ಕರೆಸಿಕೊಂಡಿದೆ.

ವಿಪಕ್ಷ ನಾಯಕ ಆಯ್ಕೆ ವಿಳಂಬ: ಬಿಎಸ್‌ವೈರನ್ನು ದೆಹಲಿಗೆ ಕರೆಸಿಕೊಂಡ ಬಿಜೆಪಿ ಹೈಕಮಾಂಡ್
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬದ ನಡುವೆ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ದೆಹಲಿಗೆ ತೆರಳಿದ್ದಾರೆ.

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

