BJP-JDS alliance

ಮೋದಿ ವರ್ಚಸ್ಸು, ಬಿಜೆಪಿ-ಜೆಡಿಎಸ್ ಮೈತ್ರಿ ನನ್ನ ಭಾರೀ ಗೆಲುವಿಗೆ ಸಹಕಾರಿ: ಶೋಭಾ ಕರಂದ್ಲಾಜೆ (ಸಂದರ್ಶನ)

ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು!
ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ನಂತರ ಕಾರ್ಯಕರ್ತರ ನೈತಿಕ ಸ್ಥೈರ್ಯ ಹೆಚ್ಚಿದೆ: ಬಸವರಾಜ ಬೊಮ್ಮಾಯಿ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಉಭಯ ಪಕ್ಷಗಳ ಕಾರ್ಯಕರ್ತರ ಆತ್ಮಸ್ಥೈರ್ಯ ಹೆಚ್ಚಿದೆ ಎಂದು ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಮಲತಾ ರಾಜಕೀಯ ನಡೆಯ ನಿರ್ದೇಶಕರು ಯಾರು? (ಸುದ್ದಿ ವಿಶ್ಲೇಷಣೆ)
ಸಂಸದರಾದ ನಂತರ ಕಡೆಯ ದಿನಗಳಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದ ಸುಮಲತಾ ಆ ಪಕ್ಷದ ಜತೆ ಇದ್ದೂ ಇಲ್ಲದಂತೆ ಅತ್ಯಂತ ಎಚ್ಚರದಿಂದ ಅಂತರ ಕಾಪಾಡಿಕೊಂಡರು. ಈಗ ಪರಿಸ್ಥಿತಿ ಬದಲಾಗಿದೆ.

ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಆತ್ಮಾಭಿಮಾನವೂ ಕುಟುಕಲಿಲ್ಲವೇ?
ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ.

ಕೈತಪ್ಪಿದ ಬಿಜೆಪಿ ಟಿಕೆಟ್, ಬೆಂಬಲಿಗರ ಸಭೆ ಕರೆದ ಸುಮಲತಾ: ಮುಂದಿನ ನಡೆ ಕುತೂಹಲ
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ತುರ್ತು ಸಭೆ ಕರೆದಿದ್ದಾರೆ.

ಜೆಡಿಎಸ್ ಜೊತೆಗಿನ ಸೀಟು ಹಂಚಿಕೆ: ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಾಗುವುದು- ಬಿವೈ ವಿಜಯೇಂದ್ರ
ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಪಕ್ಷದ ಹೈಕಮಾಂಡ್‌ನೊಂದಿಗೆ ಸಮಾಲೋಚಿಸಿದ ನಂತರ ಜೆಡಿಎಸ್ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದೇನೆ ಮತ್ತು ಈ ವಿಷಯವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದರು.

ತುಮಕೂರು ಲೋಕಸಭಾ ಕ್ಷೇತ್ರದಿಂದ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿಸಲು ಚಿಂತನೆ? ಅತಂತ್ರದಲ್ಲಿ ವಿ ಸೋಮಣ್ಣ!
ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಥಾನದಿಂದ ಸ್ಪರ್ಧಿಸಲು ಯೋಗ್ಯ ಅಭ್ಯರ್ಥಿ ಎಂದು ಹೇಳಲಾಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ತೀರ್ಮಾನಕ್ಕೆ ಬರಲು ಕಷ್ಟವಾಗುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಗ್ನಿಪರೀಕ್ಷೆ!
ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸದಲ್ಲಿದ್ದು, ಮೈತ್ರಿಯಲ್ಲಿ ಇನ್ನೂ ಒಂದು ಕ್ಷೇತ್ರದಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದೆ.

