BJP-JDS alliance

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ, ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿವಿ ಸದಾನಂದ ಗೌಡ
ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಇದೀಗ ಈ ಸಾಲಿಗೆ ಸಂಸದ ಡಿವಿ ಸದಾನಂದ ಗೌಡ ಸೇರಿದ್ದಾರೆ.

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ
2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ 19 ಶಾಸಕರ ಪೈಕಿ 11 ಶಾಸಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬುಧವಾರ ಹೇಳಿದ್ದಾರೆ. .

ಬಿಜೆಪಿಯೊಂದಿಗಿನ ಮೈತ್ರಿ ತಂದ ಸಂಕಷ್ಟ; ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ, ಅತೃಪ್ತ ಶಾಸಕರ ಮನವೊಲಿಕೆ
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪಕ್ಷದ ಗುರುಮಿಠಕಲ್ ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನವೊಲಿಸುವಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಮೈತ್ರಿ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಲಾಗಿದೆ: ಎಚ್.ಡಿ. ಕುಮಾರಸ್ವಾಮಿ
ಬಿಜೆಪಿ ಜೊತೆಗಿನ ಪಕ್ಷದ ಮೈತ್ರಿಯ ಹಿಂದಿನ ಉದ್ಧೇಶವನ್ನು ಮುಸ್ಲಿಂ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಮೈತ್ರಿ ಕುರಿತಾದ ಎಲ್ಲಾ ವಿಚಾರಗಳನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆ
ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ನಿರ್ಧರಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ, ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇದೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಕೊಟ್ಟರು.

ದೇಶದಲ್ಲಿ ಕಾಂಗ್ರೆಸ್ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಸಾಬೀತುಪಡಿಸಿದೆ: ಜಮೀರ್ ಅಹ್ಮದ್ ಖಾನ್
ಜೆಡಿಎಸ್ ಶುಕ್ರವಾರ ಬಿಜೆಪಿ ನೇತೃತ್ವದ ಎನ್‌ಡಿಗೆ ಸೇರಿಕೊಂಡಿದ್ದು, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್, ಬಿಜೆಪಿ-ಜೆಡಿಎಸ್ ಮೈತ್ರಿಯು ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯತೀತ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷ ಎನ್‌ಡಿಎ ಸೇರಿರುವುದರಿಂದ ನಮಗೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಜಿ ಪರಮೇಶ್ವರ್
ಶುಕ್ರವಾರ ಜನತಾ ದಳ (ಜಾತ್ಯತೀತ) ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ, ಕರ್ನಾಟಕದ ಗೃಹ ಸಚಿವ ಜಿ ಪರಮೇಶ್ವರ ಅವರು, ಈ ಬೆಳವಣಿಗೆಯಿಂದ ಕಾಂಗ್ರೆಸ್ ವಿಚಲಿತವಾಗಿಲ್ಲ ಎಂದು ಹೇಳಿದರು.

ಬಹುಕಾಲದ ಶಂಕಿತ ರಹಸ್ಯ ಬಯಲಾಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ನಾಯಕ ಪಿ ಚಿದಂಬರಂ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬಹುಕಾಲದ ಶಂಕಿತ ರಹಸ್ಯವೊಂದು ಕೊನೆಗೂ ಹೊರಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

