ದೇಶದ್ವೇಷ ಹರಡಲು 'ವಿಭಜನೆ ಸ್ಮರಣೆ ದಿನ' ಆಚರಿಸಲಾಗುತ್ತಿದೆ: ಬಿಜೆಪಿ-ಸಂಘ ಪರಿವಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮಾಡಿದ ಭಾಷಣದಲ್ಲಿ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಸಂಘ ಪರಿವಾರ ತನ್ನ ಲಾಭಕ್ಕಾಗಿ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.