BJP Leaders

ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!
ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ.

'ಸುಮ್ಮನೆ ಸಮಯ ಹಾಳು ಮಾಡುತ್ತಿದ್ದೀರಿ': ರಕ್ಷಣಾ ಇಲಾಖೆ ಸಮಿತಿ ಸಭೆಯಲ್ಲಿ ಸಿಟ್ಟಿನಿಂದ ಹೊರನಡೆದ ರಾಹುಲ್ ಗಾಂಧಿ!
ರಕ್ಷಣಾ ಸಂಸದೀಯ ಸಮಿತಿ ಸಭೆಯಿಂದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಇತರ ಸದಸ್ಯರು ಮಧ್ಯದಲ್ಲಿಯೇ ಹೊರನಡೆದ ಪ್ರಸಂಗ ನಡೆದಿದೆ.

ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರಿಂದ ಸಿಸಿಟಿವಿ ಧ್ವಂಸ
ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು ಭಾನುವಾರ ಸಂಜೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ದೆಹಲಿ ಸರ್ಕಾರದ ಮೂಲಗಳು ತಿಳಿಸಿವೆ.

ಅತ್ತ ರೈತರಿಂದ ಭಾರತ ಬಂದ್; ಇತ್ತ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ; ಬಿಜೆಪಿ ನಾಯಕರಿಂದ ಕಾಯ್ದೆ ಬೆಂಬಲಿಸಿ ಟ್ವೀಟ್
ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ರೈತರ ದೆಹಲಿ ಚಲೋ ಮಂಗಳವಾರ 13ನೇ ದಿನಕ್ಕೆ ಕಾಲಿಟ್ಟು ಇಂದು ಬೆಳಗ್ಗೆ 11 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಬಂದ್ ನಡೆಯಲಿದೆ.

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ. ಶಿವಕುಮಾರ್
ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿ
ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಪ್ರತಿಷ್ಠೆ ಬದಿಗೊತ್ತಿ ಒಗ್ಗೂಡಿದ ಬಿಜೆಪಿಗರು
ಬೆಳಗಾವಿ ಡಿಸಿಸಿ (ಬೆಳಗಾವಿ ಜಿಲ್ಲಾ ಮಧ್ಯವರ್ತಿ) ಬ್ಯಾಂಕ್ ಚುನಾವಣೆಗೆ ಸಂಬಂಧಿಸಿ ಜಿಲ್ಲಾ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಬಣ ರಾಜಕೀಯ ಇದೀಗ ಪಕ್ಷದ ಹೈಕಮಾಂಡ್ ಮತ್ತು ಆರ್'ಎಸ್ಎಸ್ ಸಲಹೆ ಸೂಚನೆಗಳ ಹಿನ್ನೆಲೆಯಲ್ಲಿ ತಣ್ಣಗಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿವೆ.

ಸಚಿವೆ ವಿರುದ್ಧ ಅಗೌರವವಾಗಿ ಮಾತನಾಡಿಲ್ಲ, ಬಿಜೆಪಿ ನಾಯಕರು ತಪ್ಪಾಗಿ ಬಿಂಬಿಸುತ್ತಿದ್ದಾರೆ: ಕಮಲ್ ನಾಥ್
ಸಚಿವೆಯ ಬಗ್ಗೆ ಹೇಳಿಕೆ ನೀಡಿ ವಿವಾದ ಎಬ್ಬಿಸಿರುವ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.

ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ: ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.

