BJP Leaders

ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ: ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಭೇಟಿ ಕುರಿತು ಬೊಮ್ಮಾಯಿ ಹೇಳಿದ್ದೇನು?
ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.

'ಬಿಜೆಪಿಯ ಕೆಲ ಅತಿರಥ-ಮಹಾರಥ ನಾಯಕರ ಜೊತೆ ಸಿದ್ದರಾಮಯ್ಯ ಒಳ ಒಪ್ಪಂದ: ಕೆಲ ಮುಖಂಡರಿಂದ ಪಕ್ಷ ಮಣ್ಣು ತಿಂದಿದೆ'
ಬಿಜೆಪಿಯ ಕೆಲ ಅತಿರಥ- ಮಹಾರಥ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬಾಂಬ್ ಸಿಡಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆ
ಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ.

ಬಿಜೆಪಿ ನಾಯಕರು ತಮ್ಮ ನಾಲಿಗೆ ಮತ್ತು ಮೆದುಳಿನ ನಡುವಣ ಸಂಪರ್ಕವನ್ನು ಕಳೆದುಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ
ಬಿಜೆಪಿ ನಾಯಕರು ತಮ್ಮ ನಾಲಿಗೆ ಹಾಗೂ ಮೆದುಳಿನ ನಡುವಿನ ಸಂಪರ್ಕವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಮಾತನಾಡುವ ಮೊದಲು ಅವರು ಯೋಚನೆ ಮಾಡುವುದಿಲ್ಲ. ಆದರೆ ಇನ್ನು ಮುಂದೆ ಮಾತನಾಡುವ ಮುನ್ನ ಬಿಜೆಪಿಯವರು ಬಹಳಷ್ಟು ಜಾಗೃತರಾಗಿರುವುದು ಅವಶ್ಯಕ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮುಖಾಮುಖಿ: ಕುಶಲೋಪರಿ ವಿಚಾರಿಸಿದ ಡಿ.ಕೆ.ಶಿವಕುಮಾರ್
ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.

'ಸಮ್ಮಿಶ್ರ ಸರ್ಕಾರ ಪತನಗೊಳಿಸಿದ 11 ಬಂಡಾಯ ಶಾಸಕರ ಖಜಾನೆ ಈಗ ಹೇರಳ, ಸಮೃದ್ಧ'!
2019ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಿಜೆಪಿಗೆ ಹಾರಿ, ಸಚಿವ ಸಂಪುಟ ಸೇರಿದ್ದ 11 ಮಂದಿ ಬಂಡಾಯ ಶಾಸಕರ ಆಸ್ತಿಯಲ್ಲಿ ಭಾರೀ ಏರಿಕೆಯಾಗಿರುವುದು ಕಂಡು ಬಂದಿದೆ.

ಲಿಂಗಾಯತ ನಾಯಕರ ಬಂಡಾಯ: ಡ್ಯಾಮೇಜ್ ಕಂಟ್ರೋಲ್ ಗೆ 'ಶಾ' ತಂತ್ರ; ತಡರಾತ್ರಿ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ
ರಾಜ್ಯ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಸ್ಟಾರ್ ಪ್ರಚಾರಕ ಕೇಂದ್ರ ಸಚಿವ ಅಮಿತ್ ಶಾ ಅವರ ದೇವನಹಳ್ಳಿ ರೋಡ್ ಶೋ ಮಳೆ ಕಾರಣ ರದ್ದಾದ ಹಿನ್ನೆಲೆಯಲ್ಲಿ ತಡ ರಾತ್ರಿ ಬಿಜೆಪಿ ರಾಜ್ಯ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.

ಗುಜರಾತ್: ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಯೊಂದಿಗೆ ವೇದಿಕೆ ಹಂಚಿಕೊಂಡ ಬಿಜೆಪಿ ನಾಯಕರು!
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಮಾರ್ಚ್ 27 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಚಿಮನ್‌ಲಾಲ್ ಭಟ್ ಅವರು ಎರಡು ದಿನಗಳ ಹಿಂದೆ ಶನಿವಾರ ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಉರಿಗೌಡ-ನಂಜೇಗೌಡ ವಿವಾದಕ್ಕೆ 'ಮದ್ದು' ಅರೆದ ನಿರ್ಮಲಾನಂದ ಸ್ವಾಮೀಜಿ: ಗೊಂದಲ ಸೃಷ್ಟಿಸದಂತೆ ಬಿಜೆಪಿ ನಾಯಕರಿಗೆ ಕಿವಿಮಾತು!
ಉರಿಗೌಡ ಮತ್ತು ನಂಜೇಗೌಡ ಎಂಬ ಇಬ್ಬರು ಟಿಪ್ಪುವನ್ನು ಕೊಂದಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಯ ವಿವಾದಕ್ಕೆ ಅಂತ್ಯ ಹಾಡಲು ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮದ್ಯ ಪ್ರವೇಶಿಸಿದ್ದಾರೆ.

