ರಾಜ್ಯಲೋಕಾಯುಕ್ತ ದಾಳಿ: ಪುತ್ರನ ಮನೆ-ಕಚೇರಿಯಲ್ಲಿ 8 ಕೋಟಿ ರೂ. ನಗದು ಪತ್ತೆ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ!
ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮತ್ತು ನಿವಾಸದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು 8.12 ಕೋಟಿ ರೂಪಾಯಿ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಂಡಿದ್ದಾರೆ.