ರಾಜಕೀಯಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ಬದಲಿಸದೇ ಇದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಪುತ್ರ ಕಣಕ್ಕೆ- ಶಾಸಕ ಎಂ.ಚಂದ್ರಪ್ಪ
ಚಿತ್ರದುರ್ಗ (ಮೀಸಲು) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಬದಲಿಸದೇ ಇದ್ದರೆ, ತಮ್ಮ ಪುತ್ರ ರಘು ಚಂದನ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.