ರಾಜ್ಯಬಾಗಲಕೋಟೆ: ಪುರಸಭೆ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ, ಕೇಸ್ ದಾಖಲು
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮದೇ ಪಕ್ಷದ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ.