BJP MLA

ಗಂಗಾವತಿ ಬಿಜೆಪಿ 'ಶಾಸಕ' ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್
ಕೊಪ್ಪಳ ಜಿಲ್ಲೆ ಗಂಗಾವತಿಯ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಭಾನುವಾರ ಕೊರೋನಾ ಪಾಸಿಟಿವ್ ಸೋಂಕಿರುವುದು ಪತ್ತೆಯಾಗಿದೆ. ಇದೀಗ ಶಾಸಕ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯ: ಕಟೀಲ್'ಗೆ ಬಿಜೆಪಿ ಶಾಸಕರ ದೂರು
ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿಯ ಶಾಸಕರ ನಿಯೋದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ದೂರು ನೀಡಿದ್ದಾರೆ.

ಶಾಸಕರ ಬೆಂಬಲ 'ಕತ್ತಿ'ಗೊ ಅಥವಾ 'ಕೋರೆ'ಗೊ?: ಒಡೆದ ಮನೆಯಾದ ಬಿಜೆಪಿ!
ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ನಮ್ಮ ಅನಿಸಿಕೆಯನ್ನ ಪಕ್ಷದ ನಾಯಕರಿಗೆ ಹೇಳಿದ್ದೇವೆ. ಅದನ್ನ ನಾನು ಬಹಿರಂಗವಾಗಿ ಹೇಳುವುದಿಲ್ಲ ಎಂದರು. ರಾಜ್ಯಸಭೆಗೆ ಯಾರನ್ನ ಆಯ್ಕೆ ಮಾಡಬೇಕು ಅನ್ನೋದನ್ನ ಬಿಜೆಪಿ ತೀರ್ಮಾನ ಮಾಡಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಮುಸ್ಲಿಂ ವರ್ತಕರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿಡಿಯೋ ವೈರಲ್
ಉತ್ತರ ಪ್ರದೇಶ ಬಿಜೆಪಿ ಶಾಸಕ ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದೇವರಿಯಾ ಜಿಲ್ಲೆಯ ಬರಹಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ತಿವಾರಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಯತ್ನಾಳ್, ಹೆಗಡೆ ವಿರುದ್ಧ ಕೇಸು ದಾಖಲಿಸಿ ಬಂಧಿಸಿ: ಡಿಜಿಪಿಗೆ ರಾಜ್ಯ ಕಾಂಗ್ರೆಸ್ ಮನವಿ
ಕೊರೊನಾ ಹರಡಲು ಮುಸ್ಲಿಮರು ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಗೋಮೂತ್ರ, ಹಸುವಿನ ಸಗಣಿಯಿಂದ ಕೊರೋನಾ ವೈರಸ್ ಗುಣಪಡಿಸಬಹುದು: ಅಸ್ಸಾಂ ಬಿಜೆಪಿ ಶಾಸಕಿ
ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಸೆಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ.

ಬಿಜೆಪಿ ಶಾಸಕ ಬುಲಂದಶಹರ್ ವಿರೇಂದ್ರ ಸಿಂಗ್ ಸಿರೋಹಿ ವಿಧಿವಶ
ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಿಜೆಪಿ ಶಾಸಕ ವಿರೇಂದ್ರ ಸಿಂಗ್ ಸಿರೋಹಿ ಸೋಮವಾರ ನಿಧನರಾಗಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣ: ಉತ್ತರ ಪ್ರದೇಶ ಬಿಜೆಪಿ ಶಾಸಕ, ಇತರೆ ಐವರಿಗೆ ಕ್ಲೀನ್ ಚಿಟ್, ಸಂಬಂಧಿ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ ಭಧೋಯ್ ಕ್ಷೇತ್ರದ ಬಿಜೆಪಿ ಶಾಸಕ ರವೀಂದ್ರ ನಾಥ್ ತ್ರಿಪಾಠಿ ಹಾಗೂ ಇತರೆ ಐವರಿಗೆ ಉತ್ತರ ಪ್ರದೇಶ ಪೊಲೀಸರು ಕ್ಲೀನ್ ಚಿಟ್ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಂಬಂಧಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಗದ ಸಚಿವ ಸ್ಥಾನ: ಸಿಎಂ ಮತ್ತು ವಿಜಯೇಂದ್ರ ವಿರುದ್ಧ ಅಸಮಾಧಾನ; ಸಂತೋಷ್ ಗೆ ಶಾಸಕರ ದೂರು
ಆಡಳಿತಾರೂಢ ಬಿಜೆಪಿಯಲ್ಲಿ ಶಾಸಕರ ಸರಣಿ ಸಭೆ, ಅನಾಮಧೇಯ ಪತ್ರದಂಥ ಬೆಳವಣಿಗೆಗಳ ಮಧ್ಯೆಯೇ ದೊಡ್ಡ ಸಂಖ್ಯೆಯ ಶಾಸಕರು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ಸಂಚಲನ ಮೂಡಿಸಿದೆ.

