ರಾಜ್ಯರೈತರ ನೆರವಿಗೆ 10 ಸಾವಿರ ಕೋಟಿ ರೂ. ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.