BJP Protest

31 ವರ್ಷದ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ: ಬಿಜೆಪಿಯಿಂದ ಬೃಹತ್ ಪ್ರತಿಭಟನೆ
1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಬೆಳಗಾವಿ: ಸದನದಲ್ಲಿ ಕೋಲಾಹಲ ಸೃಷ್ಟಿಸಿದ 'ಮುಸ್ಲಿಂ ಸ್ಪೀಕರ್' ಹೇಳಿಕೆ; ಜಮೀರ್ ಉಚ್ಚಾಟಿಸಲು ಪ್ರತಿಪಕ್ಷಗಳ ಆಗ್ರಹ
ಇತ್ತೀಚೆಗೆ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಉಚ್ಚಾಟಿಸುವಂತೆ ಪ್ರತಿಪಕ್ಷಗಳ ಸದಸ್ಯರು ವಿಧಾನಸಭೆಯಲ್ಲಿ ಪಟ್ಟು ಹಿಡಿದಿದ್ದರು.

ರೈತರಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಬಸವರಾಜ ಬೊಮ್ಮಾಯಿ
ಸರ್ಕಾರ ರೈತರಿಗೆ ಏಳು ಗಂಟೆ 3-ಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿದ 'ಕಾವೇರಿ' ಕಿಚ್ಚು: ವಿವಿಧ ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ
ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ 'ಕಾವೇರಿ' ಕಿಚ್ಚು ಜೋರಾಗಿದೆ. ಇಂದು ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು ಇದೀಗ ಬೆಂಗಳೂರು ಬಂದ್ ಗೂ ಕರೆ ನೀಡಲಾಗಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ, ಗೃಹ ಸಚಿವರು ಹೇಳಿದ್ದು ಹೀಗೆ...
ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಸೆಪ್ಟೆಂಬರ್ 15 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಕುರಿತ ಅರ್ಜಿಯ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಪೀಠ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.

ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಇಲ್ಲ- ಸಂಸದ ಪ್ರತಾಪ್ ಸಿಂಹ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾಳೆ ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

SCSP, TSP ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ; ದಲಿತರಿಗೆ ಸರ್ಕಾರದಿಂದ ದೊಡ್ಡ ಅನ್ಯಾಯ: ಬಿಜೆಪಿ ಪ್ರತಿಭಟನೆಯಲ್ಲಿ ಬೊಮ್ಮಾಯಿ
ಎಸ್ ಸಿಪಿ/ಟಿಎಸ್‌ಪಿ ಯೋಜನೆಯ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸುತ್ತಿದೆ.

