ದೇಶಸಿಎಎ ವಿಚಾರದಲ್ಲಿ ಬಿಜೆಪಿಯೊಡನೆ ಭಿನ್ನಮತ: ದೆಹಲಿ ಚುನಾವಣಾ ಕಣದಿಂದ ಹಿಂದೆ ಸರಿದ ಅಕಾಲಿ ದಳ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯ ಬಗ್ಗೆ ತನ್ನ ನಿಲುವನ್ನು ಬದಲಾಯಿಸುವಂತೆ ತನ್ನ ಮಿತ್ರಪಕ್ಷ ಭಾರತೀಯ ಜನತಾ ಪಕ್ಷ ಕೇಳಿದ ಹಿನ್ನೆಲೆಯಲ್ಲಿ ಮುಂದಿನ ತಿಂಗಳುನಡೆಯುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಶಿರೋಮಣಿ ಅಕಾಲಿ ದಳ ಸೋಮವಾರ ಹೇಳಿದೆ.