ರಾಜಕೀಯಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಕುರಿತು ಹೈಕಮಾಂಡ್ ನಿರ್ಧರಿಸಲಿದೆ: ಸಂಸದ ಪ್ರತಾಪ್ ಸಿಂಹ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂಬ ಊಹಾಪೋಹಗಳ ನಡುವೆ, ಲೋಕಸಭೆ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ಪಕ್ಷದ ಉನ್ನತ ನಾಯಕರ ಮೇಲಿದೆ ಎಂದು ಹೇಳಿದ್ದಾರೆ.