ರಾಜಕೀಯಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು!
ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.