ದೇಶಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ
ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್ಲಾಲ್ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.