BK Hariprasad

ಕೋಮುಗಲಭೆಗೆ ಯತ್ನ ವಿಚಾರ: ಬಿಕೆ ಹರಿಪ್ರಸಾದ್ ವಿರುದ್ಧ ಪುನೀತ್ ಕೆರೆಹಳ್ಳಿ ದೂರು
ಸಮಾಜದಲ್ಲಿ ಕೋಮುಗಲಭೆ ಸೃಷ್ಟಿಸಲು ತನ್ನ ಫೋನ್ ನಂಬರ್ ಬಳಸಿ ನಕಲಿ ವಾಟ್ಸಾಪ್ ಸಂದೇಶಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಿರುವ ರಾಷ್ಟ್ರರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಅವರು ಬಸವನಗುಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆ: ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ವಾಗ್ದಾಳಿ ನಡೆಸಿದರು.

ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ್
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬಿಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು: ಬಿಸಿ ಪಾಟೀಲ್
ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ನಾವು ಟಿಪ್ಪು ಸುಲ್ತಾನ್ ಪರ ಎನ್ನುತ್ತಿದ್ದವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು: ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್ ಕಿಡಿ
ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು. ಅವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಭಾನುವಾರ ಹೇಳಿದರು.

ಹೈದರಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿದ್ದರಾಮಯ್ಯ- ಹರಿಪ್ರಸಾದ್ ನಡುವಿನ ಭಿನ್ನಮತ ಶಮನ ಸಾಧ್ಯತೆ!
ಪುನರ್ ರಚನೆಗೊಂಡ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮೊದಲ ಸಭೆ ಇಂದು (ಶನಿವಾರ) ನಡೆಯಲಿದೆ. ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ರಣರಂಗದಲ್ಲಿ ಒಂಟಿ ಸೇನಾನಿಯಾದ ಹರಿಪ್ರಸಾದ್! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್`ಪ್ರಚಂಡ ಸೈನ್ಯ ಬಲದ ಎದುರು ಸೆಣಸಲು ನಿಂತ ಒಂಟಿ ಸೇನಾನಿ ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುದ್ಧಕ್ಕಿಳಿದಿರುವ ಹಿರಿಯ ಕಾಂಗ್ರೆಸ್ ನಾಯಕರೂ ಆದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಸ್ಥಿತಿ ಇದು.

ಅಸಮಾಧಾನಿತ ಹರಿಪ್ರಸಾದ್ ರಾಜ್ಯ ಪ್ರವಾಸ: ಹೈಕಮಾಂಡ್ ಮಧ್ಯ ಪ್ರವೇಶಿಸದಿದ್ದರೇ ಸಿಎಂಗೆ ಮತ್ತಷ್ಟು ಪ್ರಯಾಸ!
ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ: ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ಶಾಸಕ ಆಗ್ರಹ
ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿದ್ದು ಬಣದ ಶಾಸಕರು ಆಗ್ರಹಿಸುತ್ತಿದ್ದಾರೆ.

