blackmail

ಬೆಳಗಾವಿ: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ದೂರು ನೀಡಿದ 24 ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ
ಯಲ್ಪಾರಟ್ಟಿಯ ಅಭಿಷೇಕ ಬಾಳಪ್ಪ ಬೆವನೂರು, ಹಾರೂಗೇರಿಯ ಆದಿಲ್ ಷಾ ಶಬ್ಬೀರ್ ಜಮಾದಾರ ಮತ್ತು ಅಲಕನೂರಿನ ಕೌತುಕ್ ಬಾನು ಬಡಿಗೇರ ಬಂಧಿತರು. ಮೂವರ ಮೇಲೂ ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ .

Bengaluru Rape case: ಮತ್ತಿನ ಔಷಧ ನೀಡಿ ನರ್ಸ್ ಮೇಲೆ ಅತ್ಯಾಚಾರ, Video ಮಾಡಿ ಬ್ಲಾಕ್ ಮೇಲ್!
26 ವರ್ಷದ ಯುವತಿ ನೀಡಿರುವ ದೂರಿನ ಮೇರೆಗೆ ಯುವಕ ಅಕ್ಕಿ ಲಕ್ಷ್ಮೀರೆಡ್ಡಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ ಮಾಲೀಕಯ್ಯ ಗುತ್ತೇದಾರ್'ಗೆ ಬ್ಲ್ಯಾಕ್‌ಮೇಲ್: 20 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ದಂಪತಿಗಳ ಬಂಧನ
ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು.

Instagramನಲ್ಲಿ ಶಿಕ್ಷಕಿಯ ಅಶ್ಲೀಲ ವೀಡಿಯೊ ಪೋಸ್ಟ್, 4 ವಿದ್ಯಾರ್ಥಿಗಳ ಬಂಧನ
ಆಗ್ರಾದ ನಿವಾಸಿಯಾಗಿರುವ ಶಿಕ್ಷಕಿ ಮಥುರಾದ ಶಾಲೆಯೊಂದರಲ್ಲಿ ಪಾಠ ಮಾಡುತ್ತಿದ್ದರು. ಅವರು ಆಗ್ರಾದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಮಾಡುತ್ತಿದ್ದರು. ಕ್ರಮೇಣ ಟ್ಯೂಷನ್ ನಲ್ಲಿನ ಓರ್ವ ವಿದ್ಯಾರ್ಥಿ ಶಿಕ್ಷಕಿಯೊಂದಿಗೆ ಸ್ನೇಹ ಸಂಬಂಧ ಬೆಳೆಸಿದ್ದ.

ಹನಿಟ್ರ್ಯಾಪ್ ಮಾಡಿ SDPI ಮುಖಂಡನಿಗೆ ಬ್ಲ್ಯಾಕ್'ಮೇಲ್: ಮಹಿಳೆ ವಿರುದ್ಧ ದೂರು ದಾಖಲು
ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆಂದು ನೆಲಮಂಗಲದ ಲೋಹಿತ್ ನಗರದ ನಿವಾಸಿ ಬಿಆರ್ ಭಾಸ್ಕರ್ ಪ್ರಸಾದ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್ ಮಾಡಿದ ಉಪನ್ಯಾಸಕನ ಬಂಧನ
ಬೆಂಗಳೂರು ನಗರದಲ್ಲಿ ಪಾರ್ಟ್ ಟೈಂ ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಉಪನ್ಯಾಸಕರನ್ನು ಬಂಧಿಸಿದ್ದಾರೆ.

ರಾಯಚೂರು: ಮೊಬೈಲಿಗೆ ಬಂದ ಲಿಂಕ್ ಕ್ಲಿಕ್ ಮಾಡಿ ಸಂಕಷ್ಟ; ತಿರುಚಿದ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್, ದೂರು ದಾಖಲು
ಹಟ್ಟಿ ಚಿನ್ನದ ಗಣಿಯಲ್ಲಿ ಗೇಜ್ ಆಪರೇಟರ್ ಫೋನ್‌ಗೆ ಅಪರಿಚಿತ ಸಂಖ್ಯೆಯಿಂದ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಂಚಕರು ಕಳೆದ ಒಂದು ವರ್ಷದಿಂದ ತಿರುಚಿದ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಸಂಬಂಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ.

ಇಡಿ ಗೆ ಹೆಸರು ಹೇಳುವುದಾಗಿ ಸೋನಿಯಾ ಗಾಂಧಿಗೆ ಹೆದರಿಸಿ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಶಾಸಕರಿಗೆ ರೂ.5 ಕೋಟಿಗೆ ಬ್ಲ್ಯಾಕ್‌ಮೆಲ್; ಇಬ್ಬರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಶೃಂಗೇರಿ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಗೆ ಅನೈತಿಕ ಸಂಬಂಧದ ಸುಳ್ಳು ಅಪಾದನೆ ಮಾಡಿ ರೂ.5 ಕೋಟಿ ನೀಡುವಂತೆ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

