BMRCL

ಮೆಟ್ರೋ ಪಿಲ್ಲರ್ ಕುಸಿತ ದುರಂತ; ಬಿಎಂಆರ್‌ಸಿಎಲ್ ಎಂಡಿ ಕಚೇರಿಗೆ ನುಗ್ಗಿ ಕರ್ನಾಟಕ ಸೇನೆ ಕಾರ್ಯಕರ್ತರ ಪ್ರತಿಭಟನೆ!
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಹಾಗೂ ಆಕೆಯ ಮಗು ಸಾವನ್ನಪ್ಪಿದ ಘಟನೆಯಿಂದ ಆಕ್ರೋಶಗೊಂಡ ಕರ್ನಾಟಕ ಸೇನೆ ಕಾರ್ಯಕರ್ತರು ಬಿಎಂಆರ್‌ಸಿಎಲ್ ಎಂಡಿ ಅಂಜುಮ್ ಪರ್ವೇಜ್ ಕಚೇರಿಗೆ ನುಗ್ಗಿ ಗುರುವಾರ ಪ್ರತಿಭಟನೆ ನಡೆಸಿದರು.

ಮೆಟ್ರೋ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ: ಕೆಲಕಾಲ ಪರದಾಡಿದ ಸಾರ್ವಜನಿಕರು!
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇತ್ತೀಚೆಗೆ ಆರಂಭಿಸಿರುವ ಕ್ವಿಕ್ ರೆಸ್ಪಾನ್ಸ್ (ಕ್ಯೂಆರ್) ಟಿಕೆಟಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕೆಲ ಕಾಲ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

ಬೆಂಗಳೂರು: ಮಾರ್ಚ್ ಮಧ್ಯಂತರದಲ್ಲಿ ವೈಟ್‌ಫೀಲ್ಡ್- ಕೆಆರ್ ಪುರಂ ಮೆಟ್ರೋ ಮಾರ್ಗ ಸಂಚಾರ ಆರಂಭ
ಬೆಂಗಳೂರಿನ ಬಹು ನಿರೀಕ್ಷಿತ ವೈಟ್‌ಫೀಲ್ಡ್ ನಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯನ್ನು 2 ಹಂತಗಳಲ್ಲಿ ನಡೆಯುತ್ತಿದ್ದು, ಈ ಪೈಕಿ ವೈಟ್‌ಫೀಲ್ಡ್-ಕೆಆರ್ ಪುರಂ ನಡುವಿನ ಮಾರ್ಗದ ಸಂಚಾರ 2023ರ ಮಾರ್ಚ್ ವೇಳೆಗೆ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ನಮ್ಮ ಮೆಟ್ರೊದಿಂದ ಸದ್ಯದಲ್ಲೇ ಆರು ಮಂದಿಯವರೆಗೆ ಗುಂಪು ಪ್ರಯಾಣಕ್ಕೆ ಏಕ ಮೆಟ್ರೋ QR ಕೋಡ್ ಆಧಾರಿತ ಟಿಕೆಟ್ ವ್ಯವಸ್ಥೆ
ನಮ್ಮ ಮೆಟ್ರೊದ ಆ್ಯಪ್ ಮತ್ತು ವಾಟ್ಸ್‌ಆ್ಯಪ್‌ನಲ್ಲಿ ಬಿಡುಗಡೆಯಾದ ಕ್ಯೂ ಆರ್ ಕೋಡ್ ಆಧಾರಿತ ಟಿಕೆಟ್ ವ್ಯವಸ್ಥೆ(QR code) ಯಶಸ್ಸಿನಿಂದ ಉತ್ತೇಜಿತವಾಗಿರುವ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಶೀಘ್ರದಲ್ಲೇ ಒಂದು ಕ್ಯೂ ಆರ್ ಕೋಡ್ ಟಿಕೆಟ್ ಬಳಸಿ ಗರಿಷ್ಠ ಆರು ಮಂದಿಯವರೆಗೆ ಪ್ರಯಾಣಿಸಲು ಅನುಮತಿ ನೀಡಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾ

ಕನ್ನಡ ರಾಜ್ಯೋತ್ಸವ ವಿಶೇಷ: ಬಿಎಂಆರ್ ಸಿಎಲ್ ನಿಂದ ಕ್ಯೂಆರ್ ಟಿಕೆಟ್ ಖರೀದಿಸುವ ಸೌಲಭ್ಯ
ಕನ್ನಡ ರಾಜ್ಯೋತ್ಸವಕ್ಕೆ ಬಿಎಂಆರ್ ಸಿಎಲ್ ರಾಜ್ಯದ ಜನತೆಗೆ ಉಡುಗೊರೆ ನೀಡಿದ್ದು, ಸಿಂಗಲ್ ಟ್ರಿಪ್ ಕ್ಯೂ ಆರ್ ಟಿಕೆಟ್ ಗಳನ್ನು ವಿತರಣೆ ಮಾಡಲಿದೆ.

ವೈಟ್‌ಫೀಲ್ಡ್-ಐಟಿಪಿಎಲ್ ಮಾರ್ಗದಲ್ಲಿ ನಮ್ಮ ಮೆಟ್ರೋ ಪ್ರಾಯೋಗಿಕ ಸಂಚಾರ; ಐಟಿ ಉದ್ಯೋಗಿಗಳ ದಶಕಗಳ ಬೇಡಿಕೆ ಈಗ ನನಸು!
ವೈಟ್‌ಫೀಲ್ಡ್ ಡಿಪೋ ಮತ್ತು ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಮೆಟ್ರೋ ನಿಲ್ದಾಣದ ನಡುವೆ ಆರು ಬೋಗಿಗಳ ಮೆಟ್ರೋ ರೈಲಿನ ಮೊದಲ ಪ್ರಾಯೋಗಿಕ ಸಂಚಾರವನ್ನು ಶುಕ್ರವಾರ ಯಶಸ್ವಿಯಾಗಿ ನಡೆಸಲಾಗಿದ್ದು, ಶೀಘ್ರದಲ್ಲೇ ಈ ಭಾಗದಲ್ಲಿ ಅಧಿಕೃತವಾಗಿ ಪ್ರಯಾಣಿಕರ ಸಂಚಾರ ಆರಂಭವಾಗಲಿದೆ.

411 ಮರಗಳ ತೆರವಿಗೆ ಹೈಕೋರ್ಟ್ ಅನುಮತಿ: ಬೆಂಗಳೂರು ಮೆಟ್ರೋದ ವಿಮಾನ ನಿಲ್ದಾಣದ ಮಾರ್ಗದ ಅಡ್ಡಿ ನಿವಾರಣೆ
ಕೆಆರ್ ಪುರಂ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೂಲಸೌಕರ್ಯ ಕಾಮಗಾರಿಗೆ ಅಡ್ಡಿಯಾಗಿದ್ದ 411 ಮರಗಳನ್ನು ತೆರವುಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್‌ಗೆ(ಬಿಎಂಆರ್‌ಸಿಎಲ್) ಹೈಕೋರ್ಟ್ ಒಪ್ಪಿಗೆ ನೀಡಿದೆ.

ಬೆಂಗಳೂರು ಮೆಟ್ರೋ ರೈಲು: 3ನೇ ಹಂತದ ಡಿಪಿಆರ್ ಸರ್ಕಾರದ ಅನುಮೋದನೆಗೆ ಸಿದ್ಧ
ಬಿಎಂಆರ್ ಸಿಎಲ್ 3 ನೇ ಹಂತದ ಅಂತಿಮ ವಿವರವಾದ ಯೋಜನಾ ವರದಿಗೆ ರಾಜ್ಯ ಸರ್ಕಾರದ ಅನುಮೋದನೆ ಪಡೆಯಲು ಸಜ್ಜಾಗಿದೆ. ಇದನ್ನು ರೈಲ್ವೆ ಸಚಿವಾಲಯದ ಸಲಹಾ ಸಂಸ್ಥೆಯಾದ ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್ ಲಿಮಿಟೆಡ್ ಸಲ್ಲಿಸಿದೆ.

ಸ್ವಾತಂತ್ರ್ಯೋತ್ಸವ 75ನೇ ವರ್ಷಾಚರಣೆ: ನಮ್ಮ ಮೆಟ್ರೋ ದಾಖಲೆ, 8.25 ಲಕ್ಷ ಮಂದಿ ಪ್ರಯಾಣ
ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಹಿನ್ನಲೆಯಲ್ಲಿ ಆಗಸ್ಟ್ 15ರಂದು ನಮ್ಮ ಮೆಟ್ರೋ ರೈಲಿನಲ್ಲಿ ದಾಖಲೆಯ ಪ್ರಯಾಣಿಕರು ಪ್ರಯಾಣಿಸಿದ್ದು, ಇದು ಈ ಹಿಂದಿನ 6.1 ಲಕ್ಷಕ್ಕಿಂತ ಹೆಚ್ಚು ಎನ್ನಲಾಗಿದೆ.

