BMTC

'ಡಿಜಿಟಲ್ ಟಿಕೆಟ್ ವ್ಯವಸ್ಥೆ' ಜಾರಿಗೆ ಬಿಎಂಟಿಸಿ ಮುಂದು!
ಡಿಸೆಂಬರ್ 23 ರಿಂದ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯುಪಿಐ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಹೊರತರಲು ಸಿದ್ಧತೆ ನಡೆಸಿದೆ.

ಸ್ಕೂಟರ್'ಗೆ ಬಿಎಂಟಿಸಿ ಬಸ್ ಡಿಕ್ಕಿ: 16 ವರ್ಷದ ಬಾಲಕಿ ದುರ್ಮರಣ
ಕೆಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ ಮಂಗಳವಾರ ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 16 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು, ಪೊಲೀಸರ ವಶಕ್ಕೆ
ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಿಎಂಟಿಸಿಯಿಂದ 921 ಎಲೆಕ್ಟ್ರಿಕ್ ಬಸ್ ತಯಾರಿಕೆಗೆ ಆರ್ಡರ್ ಪಡೆದ ಟಾಟಾ ಮೋಟಾರ್ಸ್
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) 921 ಎಲೆಕ್ಟ್ರಿಕ್ ಬಸ್‌ಗಳ ತಯಾರಿಕೆಗೆ ಆರ್ಡರ್ ಪಡೆದಿರುವುದಾಗಿ ಟಾಟಾ ಮೋಟಾರ್ಸ್ ಗುರುವಾರ ಪ್ರಕಟಿಸಿದೆ. ಒಪ್ಪಂದದ ಪ್ರಕಾರ, ಕಂಪನಿಯು 12 ವರ್ಷಗಳವರೆಗೆ 12 ಮೀಟರ್ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸುತ್ತದೆ, ಕಾರ್ಯಾಚರಿಸುತ್ತದೆ ಮತ್ತು ನಿರ್ವಹಿಸಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್
ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R.ಮಾರ್ಕೆಟ್ ಕಡೆ ತೆರಳುತ್ತಿದ್ದ ಬಸ್

ಒತ್ತಡಗಳಿಗೆ ಮಣಿದು ಕೊನೆಗೂ ವೀಕೆಂಡ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ. ಬೆಂಗಳೂರಿನಲ್ಲಿ ಜ.29ರವರೆಗೂ ಶಾಲೆಗಳು ಬಂದ್!
ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಮುಂದುವರಿಸುವುದಾಗಿ ಹೇಳಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ ಖಾಸಗೀಕರಣ ಇಲ್ಲ: ಮೇಲ್ಮನೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಖಾಸಗೀಕರಣದ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಮಾಜ ಕಲ್ಯಾಣ ಸಚಿವರು ಆಗಿರುವ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಹೇಳಿದ್ದಾರೆ.

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.

