Boeing centre inaugaration

ಇಂದು ಕರ್ನಾಟಕಕ್ಕೆ ಪ್ರಧಾನಿ ಭೇಟಿ: ಕಲಬುರಗಿ ನಂತರ ಮಧ್ಯಾಹ್ನ ಬೆಂಗಳೂರಿಗೆ ಆಗಮನ, ಸಂಚಾರ ಮಾರ್ಗ ಬದಲಾವಣೆ ವಿವರ ಹೀಗಿದೆ...
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶುಕ್ರವಾರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ದೆಹಲಿಯಿಂದ ಹೊರಟು ಬೆಳಗ್ಗೆ 9:35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ.

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

