Bommai

ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ: ಸಿಎಂ ಬೊಮ್ಮಾಯಿ
ಯಾವುದೇ ಭಯವಿಲ್ಲದೆ 365 ದಿನ ಧಣಿವರಿಯದೇ ಕೆಲಸ ಮಾಡುವಷ್ಟು ಶಕ್ತಿ ನನ್ನಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಜನತೆ ಬೆಂಗಳೂರಿನಲ್ಲಿ ಬದಲಾವಣೆಗಳನ್ನು ಕಾಣಲಿದೆ: ಸಿಎಂ ಬೊಮ್ಮಾಯಿ
ನಗರವನ್ನು ಸುಧಾರಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಾಕಷ್ಟು ಕಾಲಾವಕಾಶಗಳನ್ನು ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಜನತೆ ಬೆಂಗಳೂರಿನಲ್ಲಿ ಬದಲಾವಣೆಗಳನ್ನು ನೋಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ: ಸಿಎಂ ಬೊಮ್ಮಾಯಿ
ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ.

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಇಂದಿನಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ
ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ಮಂಗಳವಾರದಿಂದ ಜಾರಿಯಾಗಲಿದ್ದು, ಮುಂದಿನ 10 ದಿನಗಳ ಕಾಲ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧಗಳು ಇರಲಿದೆ.

ಕೋವಿಡ್ ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ: ಸಿಎಂ ಬೊಮ್ಮಾಯಿ
ಕೋವಿಡ್ ನಿಂದ ತಂದೆತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ: ಅರುಣ್ ಸಿಂಗ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಪಕ್ಷದಲ್ಲಿನ ಬದಲಾವಣೆ ಮಾಧ್ಯಮಗಳ ಸೃಷ್ಟಿಯಷ್ಟೇ, 2023ರ ಚುನಾವಣೆಯನ್ನು ಬಿಜೆಪಿ ಒಗ್ಗಟ್ಟಿನಿಂದ ಎದುರಿಸಲಿದೆ: ಸಿಎಂ ಬೊಮ್ಮಾಯಿ
ಪಕ್ಷದಲ್ಲಿ ಬದಲಾವಣೆ ಆಗುತ್ತದೆ ಎನ್ನುವುದು ಕೇವಲ ಮಾಧ್ಯಮಗಳ ಸೃಷ್ಟಿಯಷ್ಟೇ. ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇದ್ದು, ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಲ್ಲ: ಸಿಎಂ ಬೊಮ್ಮಾಯಿ
ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

