Bommai

ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿ: ಯುವ ಜನತೆಗೆ ಸಿಎಂ ಬೊಮ್ಮಾಯಿ ಕರೆ
ಮಾದಕ ವಸ್ತುಗಳ ಪಿಡುಗು ತೊಲಗಿಸಲು ಯುವಕರು ಸರ್ಕಾರದೊಂದಿಗೆ ಕೈಜೋಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಕರೆ ನೀಡಿದ್ದಾರೆ.

ರೈತರ ಆದಾಯ ಹೆಚ್ಚಿಸಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆಗೆ ಚಿಂತನೆ: ಸಿಎಂ ಬೊಮ್ಮಾಯಿ
ರೈತರ ಹಿತಾಸಕ್ತಿ ಕಾಪಾಡಲು ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಪುನರುಚ್ಚರಿಸಿದರು.

ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ 2023 ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆಯಿಂದ ಸದನದ ಕಲಾಪಕ್ಕೆ ಹೊಡೆತ: ಸಿಎಂ ಬೊಮ್ಮಾಯಿ
ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನ ಪರಿಣಾಮಕಾರಿಯ ಮತ್ತು ಫಲಪ್ರದವಾಗಿತ್ತು ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸದನದಲ್ಲಿ ಆಡಳಿತ ಪಕ್ಷವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗೆ ಮುಂದಾದಾಗಲೆಲ್ಲ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿತ್ತು ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ?: ಹುದ್ದೆ, ಪದವಿ ಶಾಶ್ವತವಲ್ಲ; ಕ್ಷೇತ್ರದ ಜನತೆ ಎದುರು ಗದ್ಗದಿತರಾದ ಬೊಮ್ಮಾಯಿ
ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆಯೇ? ಇಂಥಹದ್ದೊಂದು ಊಹಾಪೋಹಗಳಿಗೆ ಸ್ವತಃ ಸಿಎಂ ಬೊಮ್ಮಾಯಿ ಅವರ ಹೇಳಿಕೆ ದಾರಿ ಮಾಡಿಕೊಟ್ಟಿದೆ.

ವಾರಣಾಸಿ ಭೇಟಿ ಫಲಪ್ರದವಾಗಿತ್ತು: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಮತಾಂತರ ನಿಷೇಧ ಕಾಯ್ದೆ ನಿರ್ಧಾರದಿಂದ ಹಿಂದೆ ಸರಿಯಿರಿ: ಸಿಎಂ ಬೊಮ್ಮಾಯಿಗೆ ಕ್ರೈಸ್ತ ಸಮುದಾಯದ ನಿಯೋಗ ಮನವಿ
ಸೋಮವಾರದಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆ ಮಂಡಿಸಲು ರಾಜ್ಯ ಸರ್ಕಾರ ಉತ್ಸುಕತೆ ತೋರಿದ್ದು, ಈ ಪ್ರಸ್ತಾವನೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.

ಸೈಬರ್ ಅಪರಾಧಗಳ ವಿರುದ್ಧ ಸಮರಕ್ಕೆ ಸಿಎಂ ಬೊಮ್ಮಾಯಿ ಕರೆ
ಸೈಬರ್ ಅಪರಾಧಗಳು ಮತ್ತು ಮಾದಕವಸ್ತು ಕಳ್ಳಸಾಗಣೆ ವಿರುದ್ಧದ ಸಮರದಲ್ಲಿ ಯಾವುದೇ ರೀತಿಯ ರಾಜಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಡಿ.13ರಂದು ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಸಿಎಂ ಬೊಮ್ಮಾಯಿ
10 ದಿನಗಳ ಕಾಲ ನಡೆಯಲಿರುವ ಚಳಿಗಾಲ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

