Bommai

'ಅವ್ವ'ನ ನೆನಪಿನಲ್ಲಿ ಪುಸ್ತಕ ಹೊರ ತರಲಿದ್ದಾರೆ ಸಿಎಂ ಬೊಮ್ಮಾಯಿ:
‘ಅವ್ವ’ (ತಾಯಿ) ಎಂಬ ಕನ್ನಡ ಕಥಾ ಸಂಕಲನವನ್ನು ಹೊರತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಕೋವಿಡ್ ಲಸಿಕಾ ಅಭಿಯಾನ ತೀವ್ರಗೊಳಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ
ಲಸಿಕಾ ಅಭಿಯಾನವನ್ನು ತೀವ್ರಗೊಳಿಸಿ 2ನೇ ಡೋಸ್ ರಾಜದ್ಯ ಸರಾಸರಿಯನ್ನು ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೋಲಾರ: ಬೆಳೆ ಹಾನಿ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ, ಪರಿಶೀಲನೆ
ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆಗಳು ನಾಶವಾಗಿ, ಮನೆಗಳು ಉರುಳಿದ್ದು, ಬುಧವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಎಂ ಬೊಮ್ಮಾಯಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡ್ತಾರೆ ಎಂಬ ಭರವಸೆ ಇದೆ: ಜಯ ಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ಮೂರು ತಿಂಗಳುಗಳಲ್ಲಿ 2ಎ ಮೀಸಲಾತಿ ಕೊಡುತ್ತಾರೆಂಬ ವಿಶ್ವಾಸವಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಬೊಮ್ಮಾಯಿ ಭೇಟಿ: ಸಾರ್ವಜನಿಕರು, ರೈತರ ಸಂಕಷ್ಟ ಆಲಿಸಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಕೆ ಸುಧಾಕರ್ ಮತ್ತು ಕಂದಾಯ ಸಚಿವ ಆರ್ ಅಶೋಕ ಅವರು ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿಗೀಡಾದ ವಿವಿಧ ಪ್ರದೇಶಗಳಿಗೆ ಭಾನುವಾರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛವಾಗಬೇಕು: ಸಿಎಂ ಬೊಮ್ಮಾಯಿ
ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛ ಮಾಡಿ ಅದನ್ನು ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡುವ ಮೂಲಕ ನಾಗರೀಕರಿಗೆ ಸೇವೆ ಸಮರ್ಪಕವಾಗಿ ಸಿಗುವ ಕೆಲಸ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಅಕಾಲಿಕ ಮಳೆ ಹಾನಿ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿ ಪರಿಶೀಲಿಸಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಮಳೆಯಿಂದ ಎದುರಾದ ಹಾನಿ ವಿಡಿಯೋಗಳ ಸಿದ್ಧವಾಗಿಟ್ಟುಕೊಳ್ಳಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯದ ಹಲವೆಡೆ ಅಕಾಲಿಕ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಅವಲೋಕನಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ (ಸಿಇಒ) ಶುಕ್ರವಾರ ಸಭೆ ನಡೆಸಿದರು.

ಬಿಟ್ ಕಾಯಿನ್ ಹಗರಣ ತನಿಖೆ ನಡೆಸಲು ತಜ್ಞರ ನೆರವು ಪಡೆದುಕೊಳ್ಳಿ: ಸಿಎಂ ಬೊಮ್ಮಾಯಿಗೆ ಹೆಚ್.ಡಿ.ಕುಮಾರಸ್ವಾಮಿ
ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸುವ ಬದಲಿಗೆ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳವಾರ ತಿಳಿಸಿದ್ದಾರೆ.

