Bommai

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ
ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ನೇಮಕಗೊಂಡಿದ್ದಾರೆ.

ಕೋವಿಡ್-19: ಮೃತರ ಕುಟುಂಬಕ್ಕೆ ಪರಿಹಾರ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ!
ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಮತ್ತು ಬಿಪಿಎಲ್ ಯೇತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ನೀಡುವ ಪರಿಹಾರ ಮೊತ್ತದಲ್ಲಿ ಬದಲಾವಣೆ ಮಾಡಿದ್ದು, ಬಿಪಿಎಲ್ ಕುಟುಂಬದ ವ್ಯಕ್ತಿಗೆ ನೀಡುವ ಪರಿಹಾರವನ್ನು ಒಂದು ರೂ.1 ಲಕ್ಷದಿಂದ ರೂ.1.50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.

ರಾಜ್ಯದಲ್ಲಿ ಮತಾಂತರ ನಿಯಂತ್ರಿಸಲು ಕಾನೂನು ಜಾರಿಗೆ ಸರ್ಕಾರ ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಕ್ಕರೆ ಆಯುಕ್ತಾಲಯ ಕಚೇರಿ ಅ.3ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ: ಸಿಎಂ ಬೊಮ್ಮಾಯಿ
ರೈತರು ಹಾಗೂ ಉತ್ತರ ಕರ್ನಾಟಕ ಜನರ ಬೇಡಿಕೆಯಾಗಿರುವ ಸಕ್ಕರೆ ಆಯುಕ್ತಾಲಯ ಕಚೇರಿಯನ್ನು ಅಕ್ಟೋಬರ್ 3 ರಂದು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!
ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಈಗಷ್ಟೇ ಸುಧಾರಿಸುತ್ತಿದೆ, ಮತ್ತೆ ಜನರಿಗೆ ಸಮಸ್ಯೆಗಳಾಗಬಾರದು: ಭಾರತ್ ಬಂದ್'ಗೆ ಸಿಎಂ ಬೊಮ್ಮಾಯಿ ನಕಾರ
ಕೋವಿಡ್ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ ಆಗ್ರಹ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ
ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ರೈತರದ್ದು ಪ್ರಾಯೋಜಿತ ಪ್ರತಿಭಟನೆ ಎಂದ ಸಿಎಂ ಬೊಮ್ಮಾಯಿ ವಿರುದ್ದ ಸಿದ್ದರಾಮಯ್ಯ ತೀವ್ರ ಕಿಡಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರಿಗೆ ಅವಮಾನ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಸಂಬಂಧ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ
'ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಸಂಬಂಧಿಸಿದಂತೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

