Bommai

ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಶೀಘ್ರದಲ್ಲೇ ಭೇಟಿ: ಸಿಎಂ ಬಸವರಾಜ ಬೊಮ್ಮಾಯಿ
ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಪ್ರವಾಹ ಸಂಕಷ್ಟದಲ್ಲಿ ಜನತೆ: ಜಿಲ್ಲೆಗಳಿಗೆ ನೂತನ ಸಚಿವರ ದೌಡು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವಸು ಸಚಿವ ಸಂಪುಟ ರಚಿಸಿದ ಬೆನ್ನಲ್ಲೇ ನೀಡಿರುವ ಟಾಸ್ಕ್ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಗಳಿಗೆ ಭೇಟಿ ನೀಡಿದ ನೂತನ ಸಚಿವರು ಅಲ್ಲಿನ ನೆರೆ ಹಾಗೂ ಕೋವಿಡ್ ಪರಿಸ್ಥಿತಿಗಳ ಕುರಿತು ಪರಿಶೀಲನೆ ನಡೆಸಿದರು.

ಬೊಮ್ಮಾಯಿ ಭೇಟಿ ಮಾಡಿದ ಶರದ್ ಪವಾರ್, ಮಹಾರಾಷ್ಟ್ರ ಸಚಿವ: ನೀರು ಹಂಚಿಕೆ ಕುರಿತು ಮಾತುಕತೆ
ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹಾಗೂ ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಉಭಯ ರಾಜ್ಯಗಳ ನಾಯಕರು ಕರ್ನಾಟಕ– ಮಹಾರಾಷ್ಟ್ರ ನದಿ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ಹಂಚಿಕೆಯಾಗದ ಖಾತೆ: ಸಿಎಂ ಬೊಮ್ಮಾಯಿ ನಿವಾಸದ ಬಳಿ ತಡರಾತ್ರಿವರೆಗೂ ಕಾದು ಕುಳಿತಿದ್ದ ನೂತನ ಸಚಿವರು!
ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬಳಿಕ ಇದೀಗ ಮಹತ್ವದ ಖಾತೆಗಳಿಗಾಗಿ ಹಗ್ಗಜಗ್ಗಾಟ ಮುಂದುವರೆದಿದೆ. ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆಯಂತೆ ಶುಕ್ರವಾರವೇ ಖಾತೆಗಳ ಹಂಚಿಕೆಯಾಗಬೇಕಿತ್ತು. ಆದರೆ, ವರಿಷ್ಠರು ಗ್ರೀನ್ ಸಿಗ್ನಲ್ ನೀಡದ ಕಾರಣ ಖಾತೆಗಳ ಹಂಚಿಕೆ ತಡವಾಗುತ್ತಿದೆ ಎಂದು ಹೇಳಲಾಗುತ್ತಿದೆ.

ನೂತನ ಸಚಿವರಿಗಿಂದು ಖಾತೆ ಹಂಚಿಕೆ: ಎಲ್ಲರ ಚಿತ್ತ ದೆಹಲಿಯತ್ತ
ನೂತನ ಸಚಿವರಿಗೆ ಶುಕ್ರವಾರ ಖಾತೆಗಳ ಹಂಚಿಕೆಯಾಗುವ ಸಂಭವವಿದ್ದು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಸುಳಿವು ನೀಡಿದ್ದಾರೆ. ತಮ್ಮ ಸಂಪುಟಕ್ಕೆ ಸೇರ್ಪಡೆಯಾಗಿರುವ 29 ಸಚಿವರಿಗೆ ನಾಳೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಗುರುವಾರ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರದ ಮಾಜಿ ಸಚಿವ ಶರದ್ ಪವಾರ್
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಮುನಿಸು ದೂರಾಗಿಸಲು ಬಿಜೆಪಿ ಯತ್ನ: ಜಗದೀಶ್ ಶೆಟ್ಟರ್'ಗೆ ಸ್ಪೀಕರ್ ಸ್ಥಾನ ನೀಡಲು ಚಿಂತನೆ?
ಬಿಜೆಪಿಯಲ್ಲಿ ನಾಯಕತ್ವ ವಿಚಾರ ಸಂಬಂಧ ಅಸಮಾಧಾನಗಳು ಭುಗಿಲೆದ್ದಿವೆ. ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿಯವರ ಸಂಪುಟದಲ್ಲಿ ಸೇರ್ಪಡೆಗೊಳ್ಳುವುದಿಲ್ಲ ಎಂದು ತಮ್ಮ ಮುನಿಸನ್ನು ಹೊರಹಾಕಿದ್ದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರನ್ನು ತಣ್ಣಗಾಗಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ಇದರಂತೆ ಶೆಟ್ಟರ್ ಅವರಿಗೆ ಸ್ಪೀಕರ್ ಸ್ಥಾನ ನೀಡಲು ಚಿಂತನೆ...

ಬಸವರಾಜ ಬೊಮ್ಮಾಯಿ ಸಿಎಂ ಆದ ಬೆನ್ನಲ್ಲೇ ಶಿಗ್ಗಾಂವಿಗೆ ಶಾಶ್ವತ ಹೆಲಿಪ್ಯಾಡ್
ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಅವರ ತವರು ಜಿಲ್ಲೆ ಹಾಗೂ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲಿ ತಕ್ಷಣಕ್ಕೆ ಹಲವಾರು ಬದಲಾವಣೆಗಳು ಕಂಡುಬರುತ್ತಿವೆ.

ಸಂಪುಟ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಬಿಜೆಪಿ: ವಿಪಕ್ಷಗಳ ತೀವ್ರ ಕಿಡಿ
ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣವಚನ ಸ್ವೀಕಾರ ಮಾಡಿ ಹಲವು ದಿನಗಳು ಕಳೆದರೂ ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಸಚಿವ ಸ್ಥಾನಕ್ಕಾಗಿ ಹೆಚ್ಚುತ್ತಿರುವ ಲಾಬಿ ಕುರಿತು ಪ್ರತಿಪಕ್ಷ ನಾಯಕರು ತೀವ್ರ ಕಿಡಿಕಾರಿದ್ದಾರೆ.

