Bommai

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ: ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆಗೆ ಸಂಪುಟ ನಿರ್ಧಾರ
ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋಶಾಲೆ'ಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕೋವಿಡ್ 3ನೇ ಅಲೆ ಆತಂಕ: ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸುವವರಿಗೆ ವಿಶೇಷ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧಾರ
ಕೋವಿಡ್ 2ನೇ ಅಲೆ ವೇಳೆ ಆಮ್ಲಜನಕ ಕೊರತೆ ಎದುರಿಸಿದ್ದರಿಂದ ಮುಂದಿನ ದಿನದಲ್ಲಿ ಈ ಸಮಸ್ಯೆ ಎದುರಾಗದಂತೆ ಕ್ರಮಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭಿಸುವವರಿಗೆ ವಿಶೇಷ ಪ್ರೋತ್ಸಾಹ ನೀಡಲು ಮುಂದಾಗಿದೆ.

ಲಾಕ್ಡೌನ್ ತೆರವು ಬಳಿಕ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಶೇ.15-20ರಷ್ಟು ಹೆಚ್ಚಳ!
ಲಾಕ್‌ಡೌನ್ ತೆರವಾದ ಬಳಿಕ ರಾಜ್ಯದಲ್ಲಿ ಶೇ 15ರಿಂದ 20ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇವುಗಳಲ್ಲಿ ಮಾದಕ ವಸ್ತು ಮತ್ತು ಸೈಬರ್ ಅಪರಾಧಗಳೂ ಸೇರಿವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆ ಕುರಿತು ವಾರಾಂತ್ಯದಲ್ಲಿ ಕಾನೂನು ತಜ್ಞರು, ಪರಿಣಿತರ ಜೊತೆ ಸಿಎಂ ಸಭೆ: ಸಚಿವ ಬೊಮ್ಮಾಯಿ
ರಾಜ್ಯ ಸರ್ಕಾರ ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸುವ ಕುರಿತಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಪರಿಣಿತರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಾರಾಂತ್ಯದಲ್ಲಿ ಚರ್ಚೆ ನಡೆಸಲಿದ್ದಾರೆ.

50 ಕೋಟಿ ರೂ. ಮೌಲ್ಯದ ಡ್ರಗ್ಸ್ ಇಂದು ನಾಶ
ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಂಡಿರುವ ರೂ.50 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಮಾದಕ ವಸ್ತುಗಳನ್ನು ಶನಿವಾರ ನಾಶಪಡಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ರಾಜ್ಯದಲ್ಲಿ ಹೊಸ ಜಲ ನೀತಿ: ಸಮಿತಿ ರಚನೆಗೆ ಸರ್ಕಾರ ನಿರ್ಧಾರ
ರಾಜ್ಯದಲ್ಲಿರುವ ನೀರಿನ ಬಳಕೆ ಕುರಿತು, ನೀರು ನಿರ್ವಹಣೆ, ಕೃಷಿ, ಕೈಗಾರಿಕೆ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕೆನ್ನುವ ದೃಷ್ಟಿಯಿಂದ ಹೊಸ ಜಲನೀತಿ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ
ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ರೂ.11 ಸಾವಿರ ಕೋಟಿ ಜಿಎಸ್‍ಟಿ ಬಾಕಿ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಬರಬೇಕಾಗಿರುವ ಜಿಎಸ್‍ಟಿ ಪರಿಹಾರ ನಷ್ಟದ ಬಾಕಿ ಮೊತ್ತ ರೂ.11 ಸಾವಿರ ಕೋಟಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ
ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

