ರಾಜಕೀಯಕಾರ್ಯಕರ್ತರೇ ಪಕ್ಷದ ಬೆನ್ನೆಲುಬು: ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಹೆಜ್ಜೆ
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸುವ ಮೂಲಕ ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿದ್ದ ಗೊಂದಲ, ಕುತೂಹಲಕ್ಕೆ ತೆರೆಬಿದ್ದಿದೆ. ಈ ಮೂಲಕ ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ.