Border row

'ಬಲವಾದ ಮತ್ತು ಸ್ಥಿರ ಸಂಬಂಧ' ಸಾಮಾನ್ಯ ಹಿತಾಸಕ್ತಿಗಳನ್ನು ಪೂರೈಸುತ್ತದೆ: ಗಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅಭಿಪ್ರಾಯ ಸ್ವಾಗತಿಸಿದ ಚೀನಾ
ಭಾರತ ಮತ್ತು ಚೀನಾ ನಡುವಿನ ಸ್ಥಿರ ಮತ್ತು ಶಾಂತಿಯುತ ಸಂಬಂಧ ಇಡೀ ಪ್ರದೇಶ ಮತ್ತು ಜಗತ್ತಿಗೆ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ ಉದ್ದಟತನ ಮುಂದುವರೆಸಿದರೆ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ ಜಾರಿಗೊಳಿಸಬೇಕಾಗುತ್ತದೆ: ಸಿಎಂ ಬೊಮ್ಮಾಯಿ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಚುನಾವಣೆ ಹೊತ್ತಿನಲ್ಲಿ ಮತ್ತೆ ಮುನ್ನಲೆಗೆ ಬಂದಿದೆ.ಅದಕ್ಕೆ ಕಾರಣ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು, ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ವಿಪಕ್ಷಗಳು ಮಹಾರಾಷ್ಟ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರ ನಿದ್ದೆ ಮಾಡುತ್ತಿದೆಯೇ ಎಂದು ಪ್ರಶ್ನಿಸುತ್ತಿದೆ.

ಶೀಘ್ರವೇ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ: ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಟಾಂಗ್
ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ನೀರು ಅವರಪ್ಪನ ಆಸ್ತಿಯಲ್ಲ, ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ; ಮಹಾರಾಷ್ಟ್ರ ಶಾಸಕರಿಗೆ ಕಾರಜೋಳ ತಿರುಗೇಟು
ಕರ್ನಾಟಕಕ್ಕೆ ನೀರು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನೀರು ಅವರಪ್ಪನ ಆಸ್ತಿಯಲ್ಲ ಎಂದು ಮಹಾರಾಷ್ಟ್ರ ಶಾಸಕರನಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಬುಧವಾರ ತಿರುಗೇಟು ನೀಡಿದ್ದಾರೆ.

ಗಡಿ ವಿವಾದ: ಮಹಾರಾಷ್ಟ್ರ, ಕರ್ನಾಟಕ ನಾಯಕರು ಸಂಯಮ ಕಾಯ್ದುಕೊಳ್ಳಬೇಕು; ಗೃಹ ಸಚಿವ ಆರಗ ಜ್ಞಾನೇಂದ್ರ
ಗಡಿ ವಿವಾದ ಸಂಬಂಧ ರಾಜಕೀಯ ನಾಯಕರು ಜನಜೀವನ ಅಸ್ತವ್ಯಸ್ತಗೊಳಿಸುವ ಹೇಳಿಕೆಗಳನ್ನು ನೀಡಬಾರದು. ಎರಡೂ ರಾಜ್ಯಗಳ ನಾಯಕರು ಸಂಯಮ ಕಾಯ್ದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದರು.

ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆ: ಗಡಿ ವಿವಾದ ಕುರಿತು ಸಂಜಯ್ ರಾವತ್ ಉದ್ಧಟತನ
ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆಂದು ಗಡಿ ವಿವಾದ ಸಂಬಂಧ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಉದ್ಧಟತನದ ಮಾತುಗಳನ್ನು ಆಡಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಬೇಡ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ
ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಹೇಳಿದ್ದಾರೆ.

ಬೆಳಗಾವಿ ಗಡಿ ವಿವಾದದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ನಿಯಂತ್ರಿಸುವುದು ಹೇಗೆ ಎಂದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ
ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

