ರಾಜ್ಯಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.