ದೇಶಕಳ್ಳತನದ ಆರೋಪ: ಇಬ್ಬರು ಬಾಲಕರ ಕಾಲನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದು ಹಲ್ಲೆ, ಮೂವರು ಶಂಕಿತರ ಬಂಧನ
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಗದು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರು ಬಾಲಕರನ್ನು ಥಳಿಸಿ ವಾಹನಕ್ಕೆ ಕಟ್ಟಿ ಎಳೆದೊಯ್ದು ಚಿತ್ರಹಿಂಸೆ ನೀಡಿದ ಪ್ರಕರಣದಲ್ಲಿ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.