Brand Bengaluru

ಬ್ರ್ಯಾಂಡ್ ಬೆಂಗಳೂರು- ಸ್ವಚ್ಛ ಬೆಂಗಳೂರು: 10 ಸಾವಿರಕ್ಕೂ ಹೆಚ್ಚು ಸಲಹೆ; ಹೆಚ್ಚಿನ ಸಿಬ್ಬಂದಿ ನಿಯೋಜಿಸುವಂತೆ ಪೌರಕಾರ್ಮಿಕರ ಆಗ್ರಹ
ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಸಲಹೆ-ಸೂಚನೆಗಳ ಮಹಾಪೂರವೇ ಹರಿದುಬಂದಿದ್ದು, ಸ್ವಚ್ಛ ಬೆಂಗಳೂರು ವಿಭಾಗಕ್ಕೆ 10,000ಕ್ಕೂ ಹೆಚ್ಚು ಸಲಹೆಗಳು ಬಂದಿವೆ.

ಬ್ರ್ಯಾಂಡ್ ಬೆಂಗಳೂರು: ನೋಡಲ್ ಅಧಿಕಾರಿಯಾಗಿ ಜಯರಾಮ್ ರಾಯಪುರ ನೇಮಕ
ಬ್ರ್ಯಾಂಡ್ ಬೆಂಗಳೂರು ಅಭಿಯಾನ ಆರಂಭಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯಪುರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

'ಬ್ರ್ಯಾಂಡ್ ಬೆಂಗಳೂರು’ ಅಭಿಯಾನ: 70 ಸಾವಿರಕ್ಕೂ ಅಧಿಕ ಜನರಿಂದ ಸಲಹೆಗಳು ಬಂದಿವೆ; ಡಿಕೆ.ಶಿವಕುಮಾರ್
ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಕುರಿತು ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರ್ಯಾಂಡ್ ಬೆಂಗಳೂರು’ ಅಭಿಯಾನಕ್ಕೆ ಕಳೆದ ಒಂದು ತಿಂಗಳಲ್ಲಿ ಸಾರ್ವಜನಿಕರಿಂದ ಬರೋಬ್ಬರಿ 70 ಸಾವಿರಕ್ಕೂ ಅಧಿಕ ಸಲಹೆಗಳು ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬ್ರ್ಯಾಂಡ್ ಬೆಂಗಳೂರು: ಅಭಿಪ್ರಾಯ, ಸಲಹೆ ನೀಡುವ ಅವಧಿ ಜುಲೈ 15 ರವರೆಗೆ ವಿಸ್ತರಣೆ
ರಾಜ್ಯ ರಾಜಧಾನಿ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ನೀಡುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಬ್ರ್ಯಾಂಡ್ ಬೆಂಗಳೂರು: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಸಲಹೆ ಪಡೆದ ಡಿ.ಕೆ. ಶಿವಕುಮಾರ್
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ನಡೆಸಿದರು.

ಬ್ರಾಂಡ್ ಬೆಂಗಳೂರು ಪೋರ್ಟಲ್ ಗೆ ಡಿಸಿಎಂ ಚಾಲನೆ, ಸಾರ್ವಜನಿಕರ ಸಲಹೆ ಕೋರಿದ ಡಿಕೆಶಿ
ಐಟಿ ರಾಜಧಾನಿಯ ಪ್ರಮುಖರೊಂದಿಗೆ ಸಭೆ ನಡೆಸಿದ ಒಂದೆರಡು ದಿನಗಳಲ್ಲೇ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಬುಧವಾರ ಪೋರ್ಟಲ್ ಗೆ ಚಾಲನೆ ನೀಡಿದ್ದು, ನಾಗರಿಕರು ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಬಹುದು ಎಂದು ಹೇಳಿದ್ದಾರೆ.

ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ: ಡಿಸಿಎಂ ಡಿಕೆ ಶಿವಕುಮಾರ್
ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಟರ್ ಬೆಂಗಳೂರು ಮೂಲಕ ಗ್ಲೋಬಲ್ ಬೆಂಗಳೂರು ನಿರ್ಮಾಣ ಮಾಡುವುದೇ ನಮ್ಮ ಧ್ಯೇಯವಾಗಿದ್ದು, ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳಗೊಂಡ ಒಂದು ಸಮಿತಿ ರಚಿಸಲಾಗುವುದು...

ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ: ಸಿಎಂ ಬೊಮ್ಮಾಯಿ ಅಸಮಾಧಾನ
ಹೊರಗಿನವರಿಂದ ‘ಬ್ರ್ಯಾಂಡ್ ಬೆಂಗಳೂರು’ ಖ್ಯಾತಿಗೆ ಧಕ್ಕೆ ತರುವ ಪ್ರಯತ್ನಗಳಾಗುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಬ್ರ್ಯಾಂಡ್ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಸಿಕ್ಕಿದ್ದೇನು?
ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರ ಶುಕ್ರವಾರ ಮಂಡಿಸಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಭಾರೀ ಅನುದಾನ ಮೀಸಲಿಟ್ಟಿದ್ದಾರೆ.

