Bribe case

ವಿದ್ಯುತ್ ಸಂಪರ್ಕ ನೀಡಲು ಲಂಚ: 1.50 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ Bescom ಎಇಇ ನಾಗರತ್ನ
1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಬದಲಾಗಿವೆ: PSI ಗೆ ಜಾಮೀನು ನೀಡಲು ಕೋರ್ಟ್ ನಕಾರ!
ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ಇತ್ತೀಚಿಗೆ ಜಾಮೀನು ಪಡೆಯುವವರಿಗೂ ಬಂಧಿಸದಿರಲು ರೂ. 50,000 ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟ ಕೆಆರ್ ಪುರಂ ಪೊಲೀಸ್ ಇನ್ಸ್‌ಪೆಕ್ಟರ್ ವಜ್ರಮುನಿ ಕೆ ಅವರಿಗೆ ಜಾಮೀನು ನೀಡಲು ನಿರಾಕರಿಸಿತು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಉಗಿದು ಉಪ್ಪಾಕಿದ ಮೇಲೆ ನಕಲಿ ಪತ್ರ 'ಅಸಲಿ'ಯಾದ ಹಕೀಕತ್ತು ಏನು ಸಿಎಂ ಸಾಹೇಬರೇ?
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು.

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆ
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಹೈಕೋರ್ಟ್‌ಗೆ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಸಲ್ಲಿಕೆ, ವಿಚಾರಣೆ ನಾಳೆಗೆ ಮುಂದೂಡಿಕೆ
ಕರ್ನಾಟಕ ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಿಂದ ಮುಕ್ತಿ ಕೋರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೋಮವಾರ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಲಂಚ ಸ್ವೀಕರಿಸಿದ ಆರೋಪ: ಮಾಡಾಳ್ ಪ್ರಶಾಂತ್ ಸೇರಿ ಐವರಿಗೆ 14 ದಿನ ನ್ಯಾಯಾಂಗ ಬಂಧನ
ಭ್ರಷ್ಟಾಚಾರ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

