bribe

ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಹದೇವಪುರ ರೆವಿನ್ಯೂ ಇನ್ಸ್ ಪೆಕ್ಟರ್
5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಖಾತಾ ಬದಲಾವಣೆಗಾಗಿ ಲಂಚ ಸ್ವೀಕಾರ: ಲೋಕಾಯುಕ್ತ ಪೊಲೀಸರಿಂದ ಇಬ್ಬರ ಬಂಧನ; ಓರ್ವ ಪರಾರಿ
ಬನಶಂಕರಿಯ ಕರಿಸಂದ್ರದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿ ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಮುಖ ಆರೋಪಿ ರಾಜಗೋಪಾಲ್ ತಲೆಮರೆಸಿಕೊಂಡಿದ್ದಾನೆ

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 11 ಸಾವಿರ ರೂ. ಲಂಚ: ವೈದ್ಯರಿಂದ ಹಣ ವಾಪಸ್ ಕೊಡಿಸಿದ ಲೋಕಾಯುಕ್ತ ಪೊಲೀಸರು
ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲು ವೈದ್ಯರು 11 ಸಾವಿರ ರೂ. ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಹಣವನ್ನು ವಾಪಸ್ ಕೊಡಿಸಿದ್ದಾರೆ.

ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ
ಪಿಂಚಣಿ ಉಪದಾನ ಪತ್ರಕ್ಕೆ ಸಹಿ ಹಾಕಲು 5 ಲಕ್ಷ ರೂಪಾಯಿ ಲಂಚ ಕೇಳಿದ ಅನುದಾನಿತ ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆಯ ಶಾಲೆಯೊಂದರಲ್ಲಿ ನಡೆದಿದೆ.

ಲಂಚ ಕೊಟ್ಟವರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಭ್ರಷ್ಟಾಚಾರ ಹಗರಣದಲ್ಲಿ ಲಂಚ ನೀಡಿದವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಮಾನವೀಯತೆ ಮರೆತ ಕಿದ್ವಾಯಿ: ಚಿಕಿತ್ಸೆಗಾಗಿ ಲಂಚ, ಔಷಧಿಗಳಿಗೆ ಹಣ; ಸರ್ಕಾರಿ ಆಸ್ಪತ್ರೆಯಲ್ಲಿ ಲಂಚಾವತಾರ!
ಕಿದ್ವಾಯಿ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ ಎದ್ದು ಕಾಣುತ್ತಿದ್ದು, ಅಧಿಕಾರಿಗಳ ನಿರ್ಲಕ್ಷಕ್ಕೆ ಬಡ ಜೀವಗಳು ಅಸುನೀಗುತ್ತಿವೆ. ಆಸ್ಪತ್ರೆಗೆ ಬರುವ ಜನರಿಗೆ ಸರಿಯಾದ ವ್ಯವಸ್ಥೆ ಇಲ್ಲ. ರಾತ್ರಿ ವೇಳೆ ಐಸಿಯು ನಲ್ಲಿ ಡಾಕ್ಟರ್ಸ್ ಇರೋದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಲಂಚ ಸ್ವೀಕರಿಸುತ್ತಿದ್ದಾಗ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ!
ಆರೋಪಿಗೆ ಜಾಮೀನು ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್'ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಿಂದ ಮತದಾರರಿಗೆ ಲಂಚ: ಎಂಇಎಸ್ ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರ ಬೆಂಬಲಿಗರು ಮನೆ ಮನೆಗೆ ತೆರಳಿ ತಮಗೆ ಮತ ನೀಡುವಂತೆ ಹಣ ನೀಡಿ ಆಮಿಷವೊಡ್ಡಿದ್ದರು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪಿಸಿದ್ದಾರೆ.

