ದೇಶಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಕುಸ್ತಿಪಟುಗಳ ಅರ್ಜಿ: ನೊಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್
ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುವಂತೆ ಕೋರಿ ಏಳು ಮಹಿಳಾ ಕುಸ್ತಿಪಟುಗಳ ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.