BRS

ತೆಲಂಗಾಣ: ಕಗಜ್‌ನಗರದಲ್ಲಿ ಬಿಆರ್‌ಎಸ್, ಬಿಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆ
ತೆಲಂಗಾಣ ವಿಧಾನಸಭೆ ಕೆಲ ದಿನಗಳು ಬಾಕಿಯಿರುವಂತೆಯೇ ಪ್ರಚಾರದ ಕಣ ರಂಗೇರಿದ್ದು, ಅಲಲ್ಲಿ ಘರ್ಷಣೆಯಂತಹ ಘಟನೆಗಳು ನಡೆಯುತ್ತಿವೆ. ಭಾನುವಾರ ರಾತ್ರಿ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಕಗಜ್‌ನಗರದಲ್ಲಿ ಬಿಆರ್ ಎಸ್ ಮತ್ತು ಬಿಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಕಾಂಗ್ರೆಸ್, ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ: ಬಿಆರ್‌ಎಸ್ ಶಾಸಕ ಆಸ್ಪತ್ರೆಗೆ ದಾಖಲು
ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ.

ತಂತ್ರಜ್ಞಾನದಲ್ಲಿ ತೆಲಂಗಾಣಕ್ಕಿಂತ ಕರ್ನಾಟಕ ಮುಂದಿದೆ: ಸಚಿವ ಪ್ರಿಯಾಂಕ್ ಖರ್ಗೆ
ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ತೆಲಂಗಾಣಕ್ಕಿಂತ ಮುಂದಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ.

ತೆಲಂಗಾಣ ಚುನಾವಣೆ: ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ ಕೆ ಚಂದ್ರಶೇಖರ್ ರಾವ್ ಟೀಕಿಸುವ ಹಕ್ಕಿಲ್ಲ- ಕೆ ಕವಿತಾ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಟೀಕಿಸುವ ಯಾವುದೇ ಅರ್ಹತೆ ಹೊಂದಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ರಾಜ್ಯದಲ್ಲಿ 'ವಿಫಲವಾಗುತ್ತಿದೆ' ಎಂದು ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ ಶುಕ್ರವಾರ ಆರೋಪಿಸಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಜನತೆ ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಹೈದರಾಬಾದ್: ನಾಮಪತ್ರ ಸಲ್ಲಿಕೆ ವೇಳೆ ಬಿಆರ್‌ಎಸ್, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ; 15 ಮಂದಿಗೆ ಗಾಯ
ಹೈದರಾಬಾದ್‌ನ ಇಬ್ರಾಹಿಂಪಟ್ಟಣದಲ್ಲಿ ಗುರುವಾರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಡುವೆ ಘರ್ಷಣೆ ನಡೆದಿದ್ದು, ಐವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 15 ಜನ ಗಾಯಗೊಂಡಿದ್ದಾರೆ...

ತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್‌ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ
ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಚಾರ ನಡೆಸುತ್ತಿದ್ದ ವೇಳೆ ತೆಲಂಗಾಣ ಸಂಸದ ಕೋತಾ ಪ್ರಭಾಕರ್ ರೆಡ್ಡಿ ಅವರಿಗೆ ಸೋಮವಾರ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ದುಬ್ಬಾಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.

ರಾಹುಲ್ ಗಾಂಧಿಯನ್ನು 'ಪೇಪರ್ ಟೈಗರ್' ಎಂದು ಕರೆದ ಬಿಆರ್‌ಎಸ್ ಎಂಎಲ್ಸಿ ಕೆ ಕವಿತಾ
ರಾಹುಲ್ ಗಾಂಧಿಯನ್ನು 'ಪೇಪರ್ ಟೈಗರ್' ಮತ್ತು ಸ್ಥಳೀಯ ರಾಜಕೀಯವನ್ನು ಅರ್ಥಮಾಡಿಕೊಳ್ಳದ ವ್ಯಕ್ತಿ ಎಂದಿರುವ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಮತ್ತು ಮುಖ್ಯಮಂತ್ರಿ ಕೆಸಿಆರ್ ಅವರ ಪುತ್ರಿ ಕೆ. ಕವಿತಾ ಶನಿವಾರ ತಮ್ಮ ದಾಳಿಯನ್ನು ಮುಂದುವರೆಸಿದ್ದಾರೆ.

ತೆಲಂಗಾಣ ಚುನಾವಣೆ: 400 ರೂ.ಗೆ ಸಿಲಿಂಡರ್; ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ - BRS ಘೋಷಣೆ!
ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

