BS Yadiyurappa

ಸಿಎಂ ಬದಲಾವಣೆ ವಿಚಾರ: ಪರ-ವಿರೋಧ ಸಹಿ ಸಂಗ್ರಹಕ್ಕೆ ಮುಂದಾದರೆ ಕಠಿಣ ಕ್ರಮ- ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಗಂಭೀರ ಸ್ವರೂಪಕ್ಕೆ ತಿರುಗುತ್ತಿದ್ದು ಇದರ ನಡುವೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ಕಠಿಣ ಸಂದೇಶವೊಂದನ್ನು ರವಾನಿಸಿದ್ದಾರೆ.

ಸ್ಲಂಗಳಲ್ಲಿ ವಾಸಿಸುವವರು ಕೊರೋನಾ ಪಾಸಿಟಿವ್ ಬಂದರೆ ಕೂಡಲೇ ಆರೈಕೆ ಕೇಂದ್ರಕ್ಕೆ ದಾಖಲಾಗಿ: ಬಿಎಸ್‌ವೈ
ಕೋವಿಡ್ ಪ್ರೇರಿತ ಲಾಕ್‌ಡೌನ್‌ಗಾಗಿ ಎರಡನೇ ಹಣಕಾಸು ಪ್ಯಾಕೇಜ್ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿ ರಚನೆಗೆ ನಿರ್ಧಾರ!
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಸಮಾಲೋಚನೆ ಸಭೆ ನಡೆದಿದ್ದು, ಮೂರನೇ ಅಲೆ ಬರಲಿದ್ದು, ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

ಕೋವಿಡ್ ಪರಿಹಾರನಿಧಿಗೆ ಸಚಿವರ 1 ವರ್ಷದ ವೇತನ ಹಾಗೂ ಶಾಸಕರ 1 ತಿಂಗಳ ವೇತನ ನೀಡಲು ಸಿಎಂ ಸಲಹೆ
ರಾಜ್ಯದಲ್ಲಿ ಕೋವಿಡ್ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಇನ್ನೆಂದು ಸಚಿವ ಸ್ಥಾನ ಕೇಳಲು ಸಿಎಂ ಮನೆ ಬಾಗಿಲಿಗೆ ಹೋಗುವುದಿಲ್ಲ: ಎಚ್ ವಿಶ್ವನಾಥ್ ಗರಂ
ಇನ್ನು ಮುಂದೆ ಎಂದೂ ಸಚಿವ ಸ್ಥಾನ ಕೇಳಲು ಮುಖ್ಯಮಂತ್ರಿ ಮನೆ ಬಾಗಿಲಿಗೆ ಹೋಗುವುದಿಲ್ಲ. ಆರ್. ಶಂಕರ್, ಎಂಟಿಬಿ ನಾಗರಾಜ್ ರೀತಿ ಪದೇ ಪದೇ ಮುಖ್ಯಮಂತ್ರಿ ಭೇಟಿ ಮಾಡುವುದಿಲ್ಲ. ಅವರ ಮನೆಗೆ ಭೇಟಿ ನೀಡುವ ಅನಿವಾರ್ಯತೆಯೂ ಇಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

ಕೇಂದ್ರದಿಂದ ಜಿಎಸ್‌ಟಿ ಪರಿಹಾರದ ಬದಲು-ಆರ್ಬಿಐ ಯಿಂದ ಸಾಲ ಪಡೆಯಲು ತೀರ್ಮಾನಿಸಿದ ರಾಜ್ಯ ಸರ್ಕಾರ!
ಕೇಂದ್ರ ಸರ್ಕಾರ ಜಿಎಸ್ ಟಿ ಪರಿಹಾರವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸುವ ಮೂಲಕ ಸಾಲದ ಅವಕಾಶವನ್ನು ರಾಜ್ಯಗಳ ವಿವೇಚನೆಗೆ ಬಿಟ್ಟಿತ್ತು. ಸಾಲ ಪಡೆ ಯಲು ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಮರಾಠಿಗರು, ಕನ್ನಡಿಗರ ಮಧ್ಯೆ ಬೇಧ ಭಾವಕ್ಕೆ ಅವಕಾಶ ನೀಡಲ್ಲ: ಸಿಎಂ ಯಡಿಯೂರಪ್ಪ
ಪೀರನವಾಡಿಯಲ್ಲಿನ ಪ್ರತಿಮೆ ಗಲಾಟೆ ಪ್ರಕರಣದಲ್ಲಿ ಮರಾಠಿಗರು,ಕನ್ನಡಿಗರು ಅಂತ ಯಾವುದೇ ಬೇಧಭಾವಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಕೊರೋನಾದಿಂದ ಸಿಎಂ ಬಿಎಸ್ ಯಡಿಯೂರಪ್ಪ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!
ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

