BS Yediyurappa

ಸಕ್ರಿಯ ರಾಜಕಾರಣದಿಂದ ದೂರವಿದ್ದರೂ ಕುಗ್ಗದ ವರ್ಚಸ್ಸು: ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಬಿಎಸ್ ವೈ ಸ್ಟಾರ್ ಕ್ಯಾಂಪೇನರ್!
ನವೆಂಬರ್ 30 ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ.

ಬರ ಪ್ರವಾಸದ ಮೂಲಕ ಅಖಾಡಕ್ಕೆ ಇಳಿದ BSY: ನವೆಂಬರ್ 3ರಿಂದ ಬಿಜೆಪಿಯಿಂದ ರಾಜ್ಯ ಪ್ರವಾಸ!
ಈ ಬಾರಿ ಮಳೆಯ ಅಭಾವದಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ರಾಜ್ಯ ಸರ್ಕಾರವೇ ಬರಪೀಡಿತ ತಾಲೂಕುಗಳನ್ನು ಪಟ್ಟಿದೆ.

ನೀವ್ ಕರ್ಕೊಂಡು ಬಂದಿದ್ದು, ಈವಾಗ ನೀವೇ ಸರಿಪಡಿಸಿ: ಬಿಎಸ್ ವೈ ಹೆಗಲಿಗೆ ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ!
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಲಿಂಗಾಯತ ವೀರಶೈವ ಸಮುದಾಯದ ಕಡೆಗಣನೆ; ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಬಿಎಸ್ ಯಡಿಯೂರಪ್ಪ ಬೆಂಬಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯು ಇದೀಗ ಆಡಳಿತ ಪಕ್ಷದೊಳಗೆ ಕೋಲಾಹಲ ಸೃಷ್ಟಿಸಿದೆ. ಇದರೊಂದಿಗೆ ಬಿಜೆಪಿಯ ಬಿಎಸ್ ಯಡಿಯೂರಪ್ಪ ಕೂಡ ಶಾಮನೂರು ಅವರ ಹೇಳಿಕೆಗಳನ್ನು ಬೆಂಬಲಿಸಿದ್ದಾರೆ.

'ಕಾವೇರಿ' ಬಂದ್ ಗೆ ಜೆಡಿಎಸ್-ಬಿಜೆಪಿ ಬೆಂಬಲ; ರಾಜಕೀಯ ಬೇಡ ಎಂದ ಡಿಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬೆಂಬಲ ನೀಡಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ಸಮಸ್ಯೆಗೆ ಡಿಎಂಕೆ-ಕಾಂಗ್ರೆಸ್ ಹೊಂದಾಣಿಕೆ ಕಾರಣ; ಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸಲು ಸರ್ಕಾರ ವಿಫಲ: ಬಿಎಸ್ ಯಡಿಯೂರಪ್ಪ
ರಾಜ್ಯ ಸರ್ಕಾರ ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಡಿಎಂಕೆ ಓಲೈಸಲು ತಮಿಳುನಾಡಿಗೆ ನೀರು; ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ, ಬಿಎಸ್ ವೈ
ಡಿಎಂಕೆ ಪಕ್ಷವನ್ನು ಓಲೈಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, ಇದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿ ಕಾವೇರಿ ರಕ್ಷಣಾ ಯಾತ್ರೆ ನಡೆಸುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆಯಾಗಿಲ್ಲ: ಮಾಜಿ ಸಿಎಂ ಯಡಿಯೂರಪ್ಪ
ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

