BS Yediyurappa

ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆ
ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ.

ನನ್ನ ರಾಜಿನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ: ಬಿ.ಎಸ್ ಯಡಿಯೂರಪ್ಪ
ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನನಗೆ ಶಕ್ತಿ ಇದೆ, ತಾಕತ್ತು ಇದೆ ಅನಿಸಿದ್ರೆ ಜವಾಬ್ದಾರಿ ಕೊಡ್ತಾರೆ: ಬಿ.ವೈ. ವಿಜಯೇಂದ್ರ
ನನಗೆ ಶಕ್ತಿ ಇದೆ, ತಾಕತ್ತು ಇದೆ.. ಕೆಲಸ ಮಾಡುವ ಸಾಮರ್ಥ್ಯವಿದೆ ಎಂದು ಬಿಜೆಪಿ ಹೈಕಮಾಂಡ್ ಗೆ ಅನ್ನಿಸಿದರೆ ಅವರೇ ಜವಾಬ್ದಾರಿ ನೀಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಹೇಳಿದ್ದಾರೆ.

ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಬೊಮ್ಮಾಯಿ, ಆರ್. ಅಶೋಕ್
ಬಿವೈ ವಿಜಯೇಂದ್ರ ಬಗ್ಗೆ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಟಿಕೆಟ್ ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀರ್ಮಾನ ಮಾಡ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?
ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್‌ವೈ ನಿರ್ಧರಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!
ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ಕಾಂಗ್ರೆಸ್ ನವರು ಸಿಎಂ ಆಗಲು ಬಿಡುವುದಿಲ್ಲ, ಮುಂದಿನ ಬಾರಿಯೂ ಬಿಜೆಪಿಗೆ ಅಧಿಕಾರ: ಬಿ.ಎಸ್ ಯಡಿಯೂರಪ್ಪ
ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೀಸಲಾತಿ ಹೆಚ್ಚಳ ಬೇಡಿಕೆ: ಎಷ್ಟು ಸಲ ನೀನು ರಾಜೀನಾಮೆ ಕೊಡ್ತಿಯಾ? – ರಾಮುಲುಗೆ ಬಿಎಸ್‌ವೈ ಬುದ್ಧಿವಾದ!
ಸಚಿವ ಬಿ. ಶ್ರೀರಾಮುಲು ಅವರು ಎಸ್ ಟಿ ಮೀಸಲಾತಿ ಹೆಚ್ಚಳ ಮಾಡದಿದ್ದರೆ ರಾಜೀನಾಮೆ ನೀಡುವುದಾಗಿ ಪದೇ ಪದೇ ಹೇಳುತ್ತಿರುವುದಕ್ಕೆ ಶುಕ್ರವಾರ ನಡೆದ ಬಿಜೆಪಿ ಚಿಂತನಾ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

