BS Yediyurappa

ಕೊರೋನಾ ಕರ್ಫ್ಯೂ ವಿಸ್ತರಣೆ ಬಗ್ಗೆ ಮೇ 10ಕ್ಕೆ ನಿರ್ಧಾರ: ಸಿಎಂ ಯಡಿಯೂರಪ್ಪ
ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮತ್ತು ಕರ್ನಾಟಕದ ಆರು ಕ್ಕೂ ಹೆಚ್ಚು ಜಿಲ್ಲೆಗಳು ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವುದರಿಂದ, ಈಗಿರುವ ಕರೋನಾ ಕರ್ಫ್ಯೂ ವಿಸ್ತರಣೆ ಸಾಧ್ಯತೆ ಬಹಳವೇ ಇದೆ ಎನ್ನಲಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತ್ರ ಯಥಾಸ್ಥಿತಿಯೇ ಮುಂದುವರಿಯಲಿದೆ ಎಂದು ಹೇಳಿಕೊಂಡಿದ್ದಾರೆ.

ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ: ತಂಡಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ನೇತೃತ್ವ; ಸುಧಾಕರ್ ಗೆ ಹಿನ್ನಡೆ?
ರಾಜ್ಯದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಕುರಿತು ತೆಗೆದುಕೊಳ್ಳುವ ಕ್ರಮಗಳ ಕುರಿತು ಪರಾಮರ್ಶಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲಾಗಿದೆ.

ಉಪ ಚುನಾವಣಾ ಫಲಿತಾಂಶ: ಬಿಜೆಪಿ ಮತ್ತು ಯಡಿಯೂರಪ್ಪ ನಾಯಕತ್ವಕ್ಕೆ ಸತ್ವ ಪರೀಕ್ಷೆ!
ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಗೆ ನಿರ್ಣಾಯಕ ಎಂದೇ ಹೇಳಲಾಗುತ್ತಿದೆ.

ಕೊರೊನಾ ಸೋಂಕು ನಿಯಂತ್ರಣ: ಮಾಹಿತಿ ಕೋರಿ ಸಿಎಂಗೆ ಸಿದ್ದರಾಮಯ್ಯ ಪತ್ರ!
ಕೊರೊನಾ ಸೋಂಕು ನಿಯಂತ್ರಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೋರಿ ಹಾಗೂ ಸಾರ್ವಜನಿಕರ ರಕ್ಷಣೆಗೆ ಸರ್ಕಾರ ಯಾವ ರೀತಿ ಮುಂದಾಗಬೇಕು ಎಂಬುದರ ಬಗ್ಗೆ ಸಲಹೆಗಳನ್ನು ನೀಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಸಿಎಂ ಬಿಎಸ್ ವೈ ಬೇಜವಾಬ್ದಾರಿತನಕ್ಕೆ ಸಾಕ್ಷಿ: ಕಾಂಗ್ರೆಸ್
ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

ಸದ್ಯಕ್ಕೆ ಲಾಕ್ಡೌನ್ ಇಲ್ಲ.. ತಾಂತ್ರಿಕ ಸಲಹಾ ಸಮಿತಿ ಲಾಕ್ಡೌನ್ಗೆ ಸೂಚಿಸಿಯೂ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಲಾಕ್ಡೌನ್ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಡುವೆ: ಡಿಕೆಶಿ
ಉಪಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಮತಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ ಜಾತಿವಾರು ಸಭೆ ನಡೆಸುತ್ತಿದ್ದು,ಮುಖ್ಯಮಂತ್ರಿಗಳ ವಿರುದ್ಧ ಚುನಾವಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಬೇಕು. ಇಲ್ಲದೇ ಹೋದಲ್ಲಿ ಪಕ್ಷದ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮುಷ್ಕರ ಕೈಬಿಡದ್ದರೆ ಶಿಸ್ತು ಕ್ರಮ: ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ
ಸಾರಿಗೆ ನೌಕರರು ಮುಷ್ಕರ ಕೈಬಿಟ್ಟುಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಸೋಂಕು ನಿಯಂತ್ರಣ; ರಾಜ್ಯದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ರಾಜ್ಯದಲ್ಲಿ ಕರೋನ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕೆಲ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ತಕ್ತಪಡಿಸಿದ್ದಾರೆ.

