BSP

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್ ಗೆ ಶಾಕ್: ಯಾಕೂಬ್'ಗೆ ಸೇರಿದ 31 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ವಶ!
ಉತ್ತರ ಪ್ರದೇಶದ ಮಾಜಿ ಸಚಿವ ಯಾಕೂಬ್ ಖುರೇಷಿ ಅಕ್ರಮವಾಗಿ ಸಂಪಾದಿಸಿದ ಚರ ಮತ್ತು ಸ್ಥಿರ ಆಸ್ತಿಯನ್ನು ಮೀರತ್ ಪೊಲೀಸರು ಜಪ್ತಿ ಮಾಡಿದ್ದು ಜಪ್ತಿ ಮಾಡಿರುವ ಆಸ್ತಿಯ ಮೌಲ್ಯ ಅಂದಾಜು 31 ಕೋಟಿ ರೂಪಾಯಿ ಆಗಿದೆ.

ಬಿಎಸ್ ಪಿಗೆ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ!
ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು!
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.

ಶಿಕ್ಷಕನ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
2010ರಲ್ಲಿ ನಡೆದಿದ್ದ ಶಿಕ್ಷಕ ಕಪೀಲ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಸೋನು ಯಾದವ್‌ಗೆ 5 ವರ್ಷ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

ವಿಪಕ್ಷಗಳ ಮೈತ್ರಿಕೂಟದ 3ನೇ ಸಭೆ: ಇಂಡಿಯಾ ಮೈತ್ರಿಕೂಟದಿಂದ ದೂರ ಉಳಿದ ಶಿರೋಮಣಿ ಅಕಾಲಿದಳ, ಬಿಎಸ್‌ಪಿ
ಇಂದಿನಿಂದ ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು.

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಇಮ್ರಾನ್ ಮಸೂದ್ ಉಚ್ಛಾಟಿಸಿದ ಮಾಯಾವತಿ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಎಸ್ ಪಿ ನಾಯಕ ಇಮ್ರಾನ್ ಮಸೂದ್ ಅವರನ್ನು ಮಂಗಳವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಲೋಕಸಭಾ ಚುನಾವಣೆ: ಬಿಎಸ್‌ಪಿ ಏಕಾಂಗಿ ಹೋರಾಟ, ಎನ್‌ಡಿಎ; INDIA ಒಕ್ಕೂಟಗಳು ದಲಿತ ವಿರೋಧಿ ಎಂದ ಮಾಯಾವತಿ
2024ರ ಲೋಕಸಭೆ ಚುನಾವಣೆ ಹಾಗೂ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಘೋಷಿಸಿದ್ದಾರೆ.

ನಾಳೆ ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆ: ಆರ್‌ಎಲ್‌ಡಿ ಗೈರು, ಬಿಎಸ್‌ಪಿಗಿಲ್ಲ ಆಹ್ವಾನ
ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಉತ್ತರ ಪ್ರದೇಶದಿಂದ ಸಮಾಜವಾದಿ ಪಕ್ಷ ಮಾತ್ರ ಭಾಗವಹಿಸುತ್ತಿದ್ದು, ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರಿಗೆ ಆಹ್ವಾನ ನೀಡಿಲ್ಲ. ಆದರೆ ಕುಟುಂಬದ ಕಾರ್ಯಕ್ರಮದ...

2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

