BSP

2024ರಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ: ಮಾಯಾವತಿ
ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 80 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಗುರುವಾರ ಇಲ್ಲಿ ಘೋಷಿಸಿದರು.

ಪರಮೇಶ್ವರ್'ಗೆ ಮತ ಹಾಕಿದರೂ ಇವಿಎಂ ವಿವಿಪ್ಯಾಟ್ ತೋರಿಸಿದ್ದು ಬಿಎಸ್'ಪಿ ಗುರುತು?
ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿನಗರ ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಮತ್ತು 'ಅಖಂಡ' ಪರ ಮಾಯಾವತಿ ಪ್ರಚಾರ!
ಬಿಜೆಪಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಗಾಂಧಿ ನಗರದಿಂದ ಹಾಗೂ ಕಾಂಗ್ರೆಸ್ ಬಂಡಾಯ ನಾಯಕ ಅಖಂಡ ಶ್ರೀನಿವಾಸ್ ಮೂರ್ತಿ ಪುಲಕೇಶಿನಗರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ.

ಪುಲಕೇಶಿನಗರ: 'ಅಣ್ಣ ಜೀತೇಗಾ, ಯೇ ಎಂಎಲ್ಎ ಇಧರ್ ಸೆ ನಹಿ ಹಟೇಗಾ'; 'ಅಖಂಡ' ಕೋಟೆ ಕೆಡವಲು ತಂತ್ರ!
ಆಗಸ್ಟ್ 2020 ರ ಡಿಜೆ ಹಳ್ಳಿ ಗಲಭೆಯ ನಂತರ ಪ್ರಬಲ ಅಲ್ಪಸಂಖ್ಯಾತ ಸಮುದಾಯವು ಅವರೊಂದಿಗೆ ಅಸಮಾಧಾನಗೊಂಡಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಮೀಸಲು ಕ್ಷೇತ್ರದಿಂದ ಬಿಎಸ್ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ನಿರ್ಧರಿಸಿದರು.

ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರ: ಬಿಎಸ್ ಪಿ ಟಿಕೆಟ್ ನಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆ
ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಟಿಕೆಟ್‌ನಲ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾದಂತೆ ಬಜೆಟ್ ಕೂಡ ಹಿಟ್ ಆಗಿದೆ: ಬಿಎಸ್‌ಪಿ ಸಂಸದ
ಕೇಂದ್ರ ಬಜೆಟ್‌ನಲ್ಲಿ ಸಾಮಾನ್ಯ ಜನರಿಗೆ ನೀಡಲಾದ ಪರಿಹಾರವು ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರದಂತೆ ಹಿಟ್ ಆಗಿದೆ ಎಂದು ಬಿಎಸ್‌ಪಿ ನಾಯಕ ಮಲೂಕ್ ನಗರ್ ಬುಧವಾರ ಹೇಳಿದ್ದಾರೆ.

ಹೆಸರು ಬದಲಾಯಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ: ಮಾಯಾವತಿ
ರಾಷ್ಟ್ರಪತಿ ಭವನದ ಪ್ರಸಿದ್ಧ ‘ಮೊಘಲ್ ಉದ್ಯಾನ’ವನ್ನು 'ಅಮೃತ್ ಉದ್ಯಾನ' ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಹೆಸರುಗಳನ್ನು ಬದಲಾಯಿಸುವ ಮೂಲಕ ದೇಶದ ಮತ್ತು ಅದರ ಜನರ 'ಸಮಸ್ಯೆಗಳು' ನಿವಾರಣೆಯಾಗುತ್ತವೆಯೇ ಎಂದು ಕೇಳಿದರು.

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ: ಮಾಯಾವತಿ
2023ರಲ್ಲಿ ನಾಲ್ಕು ರಾಜ್ಯಗಳಿಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ; ಮೂವರು ಸದಸ್ಯರನ್ನು ಉಚ್ಚಾಟಿಸಿದ ಬಿಎಸ್‌ಪಿ
ಯಮುನಾನಗರ ಜಿಲ್ಲಾ ಪರಿಷತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ್ದಕ್ಕಾಗಿ ಬಹುಜನ ಸಮಾಜ ಪಕ್ಷವು ತನ್ನ ಮೂವರು ಸದಸ್ಯರನ್ನು ಉಚ್ಚಾಟಿಸಿದೆ.

