BSY

ಸತತ 2ನೇ ಅವಧಿಗೆ ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ: ಬಿಎಸ್'ವೈ, ಸಿಎಂ ಬೊಮ್ಮಾಯಿ ಭಾಗಿ
ಗುಜರಾತ್ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುತ್ತಿದ್ದಾರೆ.

ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಇಂದಿನಿಂದ ರಾಜ್ಯ ಪ್ರವಾಸ ಆರಂಭ
2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆಯೇ, ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಎಸ್‌ವೈ, ಹೆಚ್‌ಡಿಕೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ ಬೊಮ್ಮಾಯಿ
ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು
”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ.

ಉಪಚುನಾವಣೆ: ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಸಿಎಂ, ಮಾಜಿ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಹಾನಗಲ್ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ'ಗೆ ಅದ್ಧೂರಿ ಸ್ವಾಗತ
ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಿಂದ ರಾಜೀನಾಮೆ ನೀಡಿದ ಬಳಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಶುಕ್ರವಾರ ಭರ್ಜರಿ ಸ್ವಾಗತ ಕೋರಿದರು.

ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಸಿಎಂ ಯಡಿಯೂರಪ್ಪ
ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲಾ ಒಗ್ಗಟ್ಟಾಗಿ ಇದ್ದೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆ: ಜಾರಕಿಹೊಳಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಶುಭಾಶಯಗಳನ್ನು ತಿಳಿಸಿರುವ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರು, ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಾರೆಂದು ಹೇಳಿದ್ದಾರೆ.

ಇಂದಿನಿಂದ ಜಂಟಿ ಅಧಿವೇಶನ: ಗೋಲಿಬಾರ್, ದೇಶದ್ರೋಹ ಕೇಸ್ ಹಿಡಿದು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊಟ್ಟ ಮೊದಲ ವಿಧಾನಮಂಡಲದ ಜಂಟಿ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದೆ.

