ರಾಜ್ಯಐಟಿ, ಬಿಟಿ ರಫ್ತಿನಲ್ಲಿ ವಿಶ್ವದಲ್ಲಿಯೇ ಮೊದಲ ಸ್ಥಾನಕ್ಕೇರಲು ಬೆಂಗಳೂರು ಸಮರ್ಥ: ಸಿಎಂ ಸಿದ್ದರಾಮಯ್ಯ
ಐಟಿ ಮತ್ತು ಬಿಟಿ ರಫ್ತಿನಲ್ಲಿ ಬೆಂಗಳೂರು ಮುಂಚೂಣಿಯಲ್ಲಿದ್ದು, ವಿಶ್ವದಲ್ಲಿಯೇ ನಂಬರ್ ಒನ್ ಆಗುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಒಟ್ಟಾರೆ ಬೆಂಗಳೂರು ಮತ್ತು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.