Budget Session

ಪುದುಚೆರಿ ವಿಧಾನಸಭೆ: ಬಜೆಟ್ ಅಧಿವೇಶನ ಆರಂಭಕ್ಕೆ ಲೆ. ಗವರ್ನರ್ ಭಾಷಣ ರದ್ದುಪಡಿಸಿದ ಸಭಾಧ್ಯಕ್ಷರು!
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಬಜೆಟ್ ಅಧಿವೇಶನದ ಭಾಷಣವನ್ನು ರದ್ದುಪಡಿಸಿ ವಿಧಾನಸಭಾಧ್ಯಕ್ಷ ವಿ ಶಿವಕೊಝುಂತು ಅಧಿವೇಶನವನ್ನು ಮಧ್ಯಾಹ್ನ 12.05ರವರೆಗೆ ಮುಂದೂಡಿದ ಪ್ರಸಂಗ ಸೋಮವಾರ ಪುದುಚೆರಿ ವಿಧಾನಸಭೆಯಲ್ಲಿ ನಡೆಯಿತು.

ಸಂಸತ್ತಿನ ಬಜೆಟ್ ಅಧಿವೇಶನ ಮೊಟಕುಗೊಳಿಸಲು ಮೋದಿ ನಕಾರ!
ಕೊರೋನಾವೈರಸ್ ಬಗ್ಗೆ ಜಾಗೃತಿ ಮೂಡಿಸುವಂತೆ ಬಿಜೆಪಿ ಸಂಸದರಿಗೆ ಇಂದು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶವು ಆರೋಗ್ಯ ಭೀತಿಯಲ್ಲಿ ಸಿಲುಕಿರುವ ಸಮಯದಲ್ಲಿ ಸಂಸದರು ಮಾಡುತ್ತಿರುವ ಕೆಲಸಗಳನ್ನು ನೋಡಬೇಕು ಎಂಬ ಕಾರಣಕ್ಕೆ ಸಂಸತ್ತಿನ ಬಜೆಟ್ ಅಧಿವೇಶನವನ್ನು ಮೊಟಕುಗೊಳಿಸುವುದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಸುದೀರ್ಘ 1 ಗಂಟೆ 46 ನಿಮಿಷ ಬಜೆಟ್ ಮಂಡಿಸಿದ ಸಿಎಂ ಬಿಎಸ್'ವೈ: ಶುಕ್ರವಾರಕ್ಕೆ ಸದನ ಮುಂದೂಡಿಕೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು...

ಬಜೆಟ್ ಅಧಿವೇಶನ: ಕಲಾಪದಲ್ಲಿ ಯತ್ನಾಳ್ ಹೇಳಿಕೆ ಗದ್ದಲ, ಸದನದ ಬಾವಿಗಿಳಿದು ಪ್ರತಿಪಕ್ಷಗಳಿಂದ ಪ್ರತಿಭಟನೆ
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಕುರಿತಾಗಿ ವಿವಾದಾತ್ಮಕ ಹೇಳಿಕ ನೀಡಿದ್ದ ಬಿಜೆಪಿ ಶಾಸಕ ಬಸನಗೊಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸದನದ ಬಾವಿಗಿಳಿದ ಕಾಂಗ್ರೆಸ್ ನಾಯಕರು, ಪ್ರತಿಭಟನೆ ನಡೆಸುತ್ತಿದ್ದಾರೆ.

ಬಜೆಟ್ ಅಧಿವೇಶನ: ದೆಹಲಿ ಹಿಂಸಾಚಾರ ಕುರಿತು ತೀವ್ರ ಗದ್ದಲ, ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಸಂಸತ್ತಿನ ಬಜೆಟ್ ಅಧಿವೇಶನದ 2ನೇ ಚರಣ ಸೋಮವಾರದಿಂದ ಆರಂಭಗೊಂಡಿದ್ದು, ದೆಹಲಿ ಹಿಂಸಾಚಾರ ಕುರಿತು ಉಭಯ ಸದನಗಳಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗ ಮುಂದೂಡಲಾಗಿದೆ.

ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ನಾಳೆ ಆರಂಭ: ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳ ತಂತ್ರ
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ನಾಳೆ ಆರಂಭವಾಗಲಿದ್ದು, ಈ ಬಾರಿ ಕಲಾಪ ಭಾರೀ ಗದ್ದಲ, ಆರೋಪ, ಪ್ರತ್ಯಾರೋಪಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಸಿಎಂ ಯಡಿಯೂರಪ್ಪ
ಬಜೆಟ್ ಅಧಿವೇಶನದ ನಂತರ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಲೋಕಸಭೆಯಲ್ಲಿ ನಿಲುವಳಿ ಸೂಚನೆ, ಬಿಜೆಪಿಯಿಂದ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೊಟೀಸ್
ಸಂಸತ್ತಿನ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮಂಗಳವಾರ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ಸಂಬಂಧ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲು ನಿರ್ಧರಿಸಿವೆ.

ಗುಂಡು ಹಾರಿಸುವುದನ್ನು ನಿಲ್ಲಿಸಿ: ಸಿಎಎ ವಿರುದ್ಧ ಲೋಕಸಭೆಯಲ್ಲಿ ದನಿ ಎತ್ತಿದ ವಿರೋಧ ಪಕ್ಷಗಳು
ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರು ದನಿ ಎತ್ತಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುವುದನ್ನು ನಿಲ್ಲಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.

