ದೇಶಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ: ಕರ್ನಾಟಕದ ಬಸ್ಗೆ ಬೆಂಕಿ, ಸಂಚಾರ ಸ್ಥಗಿತ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ ರಾಜ್ಯದ ಅಂತರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.