ರಾಜ್ಯಬೆಂಗಳೂರು: ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿದ್ದ ಬಸ್ ಶೆಲ್ಟರ್ ಕಳವು ಪ್ರಕರಣ; ತನಿಖೆಯಲ್ಲಿ ಸತ್ಯಾಂಶ ಬಯಲು!
ಹೈಗ್ರೌಂಡ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿದ್ದ ಬಸ್ ಶೆಲ್ಟರ್ ಕಳವು ಪ್ರಕರಣ ಬಗೆಹರಿದಿದೆ. ಇದು ಅವೈಜ್ಞಾನಿಕವಾಗಿದ್ದು, ಪಾದಚಾರಿಗಳ ಜೀವಕ್ಕೆ ಅಪಾಯ ತರುತ್ತಿದೆ ಎಂಬ ಸಾರ್ವಜನಿಕರಿಂದ ದೂರಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬಸ್ ತಂಗುದಾಣವನ್ನು ಕೆಡವಿ ಗೋದಾಮಿಗೆ ಸ್ಥಳಾಂತರಿಸಿದ್ದಾರೆ.